ಗುರುವಾರ , ನವೆಂಬರ್ 21, 2019
22 °C

ಸಿಇಒ ಭೇಟಿ: ಮೂಲ ಸೌಲಭ್ಯ ಕುರಿತು ಪರಿಶೀಲನೆ

Published:
Updated:
Prajavani

ಸೂಲಿಬೆಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್, ಇಟ್ಟಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಸ್ತೂರು ಗ್ರಾಮಕ್ಕೆ ಭಾನುವಾರ ಭೇಟಿ ನೀಡಿ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಗ್ರಾಮಸ್ಥರಿಂದ ಮಾಹಿತಿ ಪಡೆದ ಅವರು, ಚರಂಡಿ ಸ್ವಚ್ಛಗೊಳಿಸಲು ಹಾಗೂ ಬೀದಿ ದೀಪ ನಿರ್ವಹಣೆ ಮಾಡಿ, ಒಂದು ವಾರದಲ್ಲಿ ವರದಿ ಕೊಡುವಂತೆ ಇಟ್ಟಸಂದ್ರ ಗ್ರಾಮ ಪಂಚಾಯಿತಿ ಅಧಿಕಾರಿ ಕೆಂಪಣ್ಣ ಅವರಿಗೆ ಸೂಚಿಸಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ ಗೌಡ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ಪ್ರತಿಕ್ರಿಯಿಸಿ (+)