ಗುರುವಾರ , ಜನವರಿ 23, 2020
21 °C

4ರಂದು ಜಿಪಂ ಸ್ಥಾಯಿ ಸಮಿತಿಗಳಿಗೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮೂರನೇ ಅವಧಿಗೆ ಸ್ಥಾಯಿ ಸಮಿತಿಗೆ ಸದಸ್ಯರನ್ನು ಹಾಗೂ ಅಧ್ಯಕ್ಷರನ್ನು ಆಯ್ಕೆ ಮಾಡಲು ಜ. 4 ರಂದು ಚುನಾವಣೆ ನಡೆಯಲಿದೆ.

ಅಂದು ಬೆಳಿಗ್ಗೆ 10ರಿಂದ 12ರ ಗಂಟೆಯವರೆಗೆ ನಾಮ ನಿರ್ದೇಶನ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 2ಕ್ಕೆ ದೇವನಹಳ್ಳಿ ತಾಲ್ಲೂಕಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಎಲ್ಲ ಚುನಾಯಿತ ಸದಸ್ಯರ ವಿಶೇಷ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ಥಾಯಿ ಸಮಿತಿ ರಚನೆಯ ಚುನಾವಣಾಧಿಕಾರಿ ವಿನುತಾರಾಣಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು