ಬುಧವಾರ, ಜನವರಿ 29, 2020
23 °C

ಸೌಲಭ್ಯ ಪಡೆಯುವುದು ವಿದ್ಯಾರ್ಥಿಗಳ ಹಕ್ಕು: ಜಿ.ಪಂ.ಉಪಾಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಮೀಪದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌ ಸೋಮವಾರ ಭೇಟಿ ನೀಡಿ ಆಹಾರ ವಿತರಣೆ ಹಾಗೂ ಆಹಾರ ದಾಸ್ತಾನು ಪರಿಶೀಲಿಸಿ ವಿದ್ಯಾರ್ಥಿನಿಯರೊಂದಿಗೆ ಊಟ ಸೇವಿಸಿದರು.

ಸರ್ಕಾರದ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿ, ‘ಸರ್ಕಾರ ಶೈಕ್ಷಣಿಕ ಉದ್ದೇಶಕ್ಕಾಗಿ ಸಾಕಷ್ಟು ಹಣವನ್ನು ವೆಚ್ಚ ಮಾಡುತ್ತಿದೆ. ಇದನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಹೊಣೆ ಅಧಿಕಾರಿಗಳದ್ದಾಗಿದೆ. ವಿದ್ಯಾರ್ಥಿ ನಿಲಯದ ಶೈಕ್ಷಣಿಕ ಬದುಕನ್ನು ಜೀವನದಲ್ಲಿ ಸದಾ ನೆನಪಿನಲ್ಲಿ ಉಳಿಯಂತೆ ನೋಡಿಕೊಳ್ಳುವ ಹೊಣೆಗಾರಿಕೆ ವಾರ್ಡ್‌ನ್‌ಗಳ ಮೇಲಿದೆ’ ಎಂದರು.

ವಿದ್ಯಾರ್ಥಿ ನಿಲಯದಲ್ಲಿ ಕಂಪ್ಯೂಟರ್ ಕೊಠಡಿಗೆ ವಿದ್ಯುತ್ ಸೌಲಭ್ಯ ದೊರಕಿಸಿಕೊಡುವಂತೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಗಮನಕ್ಕೆ ತಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು