ದೇವನಹಳ್ಳಿ: ತಾಲ್ಲೂಕಿನ ಬಹು ನಿರೀಕ್ಷಿತ ಕ್ರೀಡಾಂಗಣದ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ ಎಂದು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾಗರಾಜು ಬೇಸರ ವ್ಯಕ್ತಪಡಿಸಿದರು.

ಗುರುವಾರ (ಮೇ 31) ಸೇವೆಯಿಂದ ನಿವೃತ್ತ ಹೊಂದಿದ ಹಿನ್ನೆಲೆಯಲ್ಲಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವರ್ಷ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ವಾರ್ಷಿಕ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಕ್ರೀಡಾಪಟುಗಳು 27 ವಿವಿಧ ವಿಭಾಗಗಳ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ವಿಜೇತರಾಗಿದ್ದರು. ಇಂತಹ ಅತ್ಯುತ್ತಮ ಪ್ರತಿಭೆಗಳನ್ನು ಸ್ಥಳೀಯವಾಗಿ ಹೊಂದಿದ್ದರೂ ಇಲ್ಲಿ ಉತ್ತಮ ಕ್ರೀಡಾಂಗಣ ಇಲ್ಲ ಎಂದು ವಿಷಾದಿಸಿದರು.

ತಾಲ್ಲೂಕಿನಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕನಾಗಿ ಸತತ 8 ವರ್ಷ ಕರ್ತವ್ಯ ನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅನೇಕ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಪ್ರಯತ್ನಿಸಿದ್ದೇನೆ.

ಉತ್ತಮ ಕ್ರೀಡಾಪಟುಗಳನ್ನು ರೂಪಿಸಲು ನುರಿತ ಕ್ರೀಡಾ ತಜ್ಞರು ನೀಡಿದ ತರಬೇತಿ, ಹಿರಿಯ ದೈಹಿಕ ಶಿಕ್ಷಕರ ಮತ್ತು ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕರ ಹಾಗೂ ಕ್ರೀಡಾ ಆಸಕ್ತರ ಸಹಕಾರ ಎಂದಿಗೂ ಮರೆಯುವಂತಿಲ್ಲ ಎಂದರು.

ಸೂಕ್ತ ಕ್ರೀಡಾಂಗಣವಿದ್ದಲ್ಲಿ ಅನೇಕ ಕ್ರೀಡಾಸಕ್ತರು ವೈಯಕ್ತಿಕ ಅಭ್ಯಾಸ ನಡೆಸಲು ಅನುಕೂಲವಾಗಲಿದೆ.
ಸಂಬಂಧಪಟ್ಟ ಇಲಾಖೆ ಈಗಲಾದರೂ ಎಚ್ಚೆತ್ತು ತ್ವರಿತಗತಿಯಲ್ಲಿ ಕ್ರೀಡಾಂಗಣ ಸಜ್ಜುಗೊಳಿಸಬೇಕಾಗಿದೆ ಎಂದರು. ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಲ್ಲಪ್ಪ ಮಾತನಾಡಿ, ನಾಗರಾಜು ಅವರು ಸುದೀರ್ಘ ಸೇವಾವಧಿಯ ಸಾಧನೆ ಶ್ಲಾಘನೀಯ. ಅಪಾರ ಕ್ರೀಡಾಭಿಮಾನಿಗಳನ್ನು ಹೊಂದಿರುವ ಅವರು ಕ್ರೀಡಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕಿರಿಯರು ಅವರ ಸೇವೆಯಲ್ಲಿನ ನಿಷ್ಠೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಮಾತನಾಡಿ, `ಯಾವುದೇ ಕಳಂಕವಿಲ್ಲದೇ ನಿವೃತ್ತಿಯಾಗುತ್ತಿರುವುದು ಮತ್ತೊಬ್ಬರಿಗೆ ಮಾರ್ಗದರ್ಶನವಾಗಿದೆ~ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, `ನಾಗರಾಜು ನಿಷ್ಠೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ~ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರ ಸಂಪನ್ಮೂಲಾಧಿಕಾರಿ ಈಶ್ವರ ಮೂರ್ತಿ, ದೊಡ್ಡಬಳ್ಳಾಪುರ ದೈಹಿಕ ಶಿಕ್ಷಣ ಪರಿವೀಕ್ಷಕ ಅಮರನಾಥ್, ವ್ಯವಸ್ಥಾಪಕ ಅಶ್ವಥ್, ಬಿ.ಆರ್.ಸಿ.ಶಿವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಪರಶುರಾಮ್, ಪುಟ್ಟಸ್ವಾಮಿ, ಮುನಿಯಪ್ಪ ಹಾಗೂ ಇಲಾಖೆ ಸಿಬ್ಬಂದಿವರ್ಗ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.