ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ಗ್ರಾಮವಾಗಿ ಬಾನಂದೂರು

ಬಾಲಗಂಗಾಧರನಾಥ ಶ್ರೀಗಳ ಪುಣ್ಯಾರಾಧನೆಯಲ್ಲಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸಲಹೆ
Last Updated 19 ಜನವರಿ 2017, 6:56 IST
ಅಕ್ಷರ ಗಾತ್ರ

ಬಿಡದಿ: ‘ಬಾಲಗಂಗಾಧರನಾಥ ಸ್ವಾಮೀಜಿ ಅವರ ಹುಟ್ಟೂರಾದ ಬಾನಂದೂರು ಗ್ರಾಮದ ಅಭಿವೃದ್ದಿಗೆ ಸರ್ಕಾರ ಬಿಡುಗಡೆ ಮಾಡಿರುವ ₹10 ಕೋಟಿ ವೆಚ್ಚದ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಬೇಕಾಗಿತ್ತು’ ಎಂದು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬಿಡದಿಯ ಬಿಜಿಎಸ್ ವೃತ್ತದಲ್ಲಿ ಬಿಜಿಎಸ್ ಸೇವಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಅವರ ನಾಲ್ಕನೇ ವರ್ಷದ ಪುಣ್ಯಾರಾಧನೆ ಮತ್ತು 73ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಾನಂದೂರು ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಯಾವ ರೀತಿಯಲ್ಲಿ ಉಪಯೋಗಿಸಬೇಕು. ಎಂತಹ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸುವ ಅಗತ್ಯವಿತ್ತು’ ಎಂದರು.

‘ಆದರೆ, ಸರ್ಕಾರ ಇದಾವುದನ್ನೂ ಮಾಡದೆ ಹತ್ತು ಕೋಟಿ ಹಣ ಬಿಡುಗಡೆ ಮಾಡಿ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿದೆ. ಇದು ಸರಿಯಾದ ಕ್ರಮ
ವಲ್ಲ. ಸ್ವಾಮೀಜಿಯವರ ಗ್ರಾಮವನ್ನು ಮಾದರಿ ಗ್ರಾಮವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು’ ಎಂದು ಸಲಹೆ ನೀಡಿದರು.

‘ಬಾಲಗಂಗಾಧರನಾಥ ಸ್ವಾಮೀಜಿ ರಾಮನಗರ ತಾಲ್ಲೂಕಿನ ಬಾನಂದೂರು ಗ್ರಾಮದಲ್ಲಿ ಜನ್ಮ ತಾಳಿದ್ದಾರೆ ಎಂಬುದೇ ಎಲ್ಲರಿಗೂ ಸಂತಸದ ವಿಷಯ. ಅವರು ಆದಿಚುಂಚನಗಿರಿ ಮಠ ತೀವ್ರ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಅದರ ಜವಾಬ್ದಾರಿ ವಹಿಸಿಕೊಂಡು ಮಠವನ್ನು ಇಡೀ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಿದ್ದಾರೆ. ಅನ್ನ, ಅಕ್ಷರ, ಆರೋಗ್ಯ, ಪರಿಸರ ಕಾಳಜಿ ಮೂಲಕ ಸ್ವಾಮೀಜಿ ಅವರು ಇಂದು ಸಮಾಜದಲ್ಲಿ ಮನೆ ಮಾತಾಗಿದ್ದಾರೆ’ ಎಂದು ಅವರು ಹೇಳಿದರು. 

ಬಿಡದಿ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್‌ ಮಾತನಾಡಿ, ‘ಬಾಲಗಂಗಾಧರನಾಥ ಸ್ವಾಮೀಜಿ ಅವರ ಆದರ್ಶ ಮತ್ತು ಶ್ರಮ ಇಂದಿನ ಸಮಾಜಕ್ಕೆ ಮಾದರಿಯಾಗಿದೆ. ಇಂತಹ ಮಹಾಪುರುಷರನ್ನು ಕೇವಲ ಒಂದು ಸಮುದಾಯ ನೆನೆಪು ಮಾಡಿಕೊಳ್ಳುವುದು ಸರಿಯಲ್ಲ’ ಎಂದರು.

ಬಿಡದಿಯ ಭಾಗ್ಯ ಭೈರವೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ವಾಮೀಜಿ  ಕುರಿತು ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ್‌, ಮಾಜಿ ಸದಸ್ಯರಾದ ಪುಟ್ಟಯ್ಯ, ಎಚ್.ಎಲ್.ಚಂದ್ರು, ಪುರಸಭೆ ಅಧ್ಯಕ್ಷೆ ವೆಂಕಟೇಶಮ್ಮ ರಾಮಕೃಷ್ಣಯ್ಯ, ಪುರಸಭೆ ಸದಸ್ಯರಾದ ಲೋಕೇಶ್, ದೇವರಾಜು, ರಮೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಗಾಣಕಲ್‌ ನಟರಾಜ್‌, ಎಪಿಎಂಸಿ ನಿರ್ದೇಶಕ ರಮೇಶ್, ಮುಖಂಡರಾದ ಎಲ್‌. ಚಂದ್ರಶೇಖರ್‌, ರಾಮನಹಳ್ಳಿ ರಮೇಶ್‌, ಬೆಟ್ಟಸ್ವಾಮಿ, ಹೊಂಬಣ್ಣ, ಜಯ ಕರ್ನಾಟಕ ಸಂಘಟನೆ ರಾಜ್ಯ ವಕ್ತಾರ ಪ್ರಕಾಶ್ ರೈ, ಬಿಡದಿ ಘಟಕದ ಅಧ್ಯಕ್ಷ ರವಿಕುಮಾರ್, ರೋಟರಿ ಕ್ಲಬ್‌ ಅಧ್ಯಕ್ಷ ಗೋವಿಂದಯ್ಯ, ಮಾಜಿ ಅಧ್ಯಕ್ಷ ಚಿಕ್ಕಣ್ಣಯ್ಯ, ಬಿಜಿಎಸ್ ಸೇವಾ ಸಮಿತಿಯ ಉಪಾಧ್ಯಕ್ಷ ಬಿ.ಎಂ.ರಾಜಶೇಖರ್, ಕಾರ್ಯದರ್ಶಿ ಬಿ.ಎಸ್. ಶಶಿಕುಮಾರ್, ಸಹಕಾರ್ಯದರ್ಶಿ ಬಿ.ಟಿ. ರಾಜಶೇಖರ್, ಖಜಾಂಚಿ ಎಂ.ಇ.ಯತೀಶ್, ಸಂಘಟನಾ ಕಾರ್ಯದರ್ಶಿ ನರಸಿಂಹಯ್ಯ  ಇದ್ದರು.

**

ಶ್ರೀಗಳು ಇಲ್ಲಿ ಜನಿಸಿ ಜಗತ್ತು ಗುರುತಿಸುವಂತಹ ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಯಾವುದೇ ಜಾತಿ ಧರ್ಮಕ್ಕೆ ಸೀಮಿತರಾಗದೆ ಸಮಾಜಮುಖಿ ಸೇವೆಯ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ
- ಸಿ. ಉಮೇಶ್‌ ,ಅಧ್ಯಕ್ಷ, ಬಿಡದಿ ಪುರಸಭೆ ಸ್ಥಾಯಿ ಸಮಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT