ದೊಡ್ಡಬಳ್ಳಾಪುರ: `ಸರ್ಕಾರಿ ಶಾಲಾ-ಕಾಲೇಜು ಆಡಳಿತಗಳಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ಇದರಿಂದ ಶಾಲೆಯ ವಾತಾವರಣ ಕಲುಷಿತವಾಗುವ ಸಂಭವ ಹೆಚ್ಚು' ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ನಗರದ ನೇಯ್ಗೆ ಬೀದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, `ಮುಂದಿನ ದಿನಗಳಲ್ಲಿ ಶಿಕ್ಷಣವು ಎಲ್ಲಾ ವರ್ಗದದವರಿಗೆ ಎಟುಕದಲಿದೆ. ಈ ದಿಸೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ' ಎಂದರು.

`ಯಾವುದೇ ಪದವಿ, ಅಧಿಕಾರ ಲಭಿಸಿ, ಸಾಮರ್ಥ್ಯ ಗಳಿಸಲು ಗುರುವಿನ ಮಾರ್ಗದರ್ಶನ ಅಗತ್ಯ. ಅವರು ತಾಲ್ಲೂಕಿನ ಶಾಲೆಗಳಲ್ಲಿ ಸುಮಾರು 160 ಶಿಕ್ಷಕರ ಕೊರತೆ ಕಂಡು ಬಂದಿದ್ದು ಶೀಘ್ರದಲ್ಲಿಯೇ ಇದನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮಾತನಾಡಿ, `ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರು ಸಮಾಜಕ್ಕೆ ಮಾದರಿಯಾಗಬೇಕು. ನಿವೃತ್ತ ಶಿಕ್ಷಕರು ತಮ್ಮ ಆಸಕ್ತಿಗೆ ಅನುಗುಣವಾಗಿ ಒಳ್ಳೆಯ ಕ್ಷೇತ್ರಗಳನ್ನು ಆರಿಸಿಕೊಂಡು ಸಕ್ರಿಯವಾಗಬೇಕಿದೆ' ಎಂದರು.

`ಶಿಕ್ಷಕರಲ್ಲಿ ಕಲಿಕೆಯ ಪ್ರವೃತ್ತಿ' ಕುರಿತು ಮಾತನಾಡಿದ ಪ್ರೊ.ಎಚ್.ಎಸ್. ನಾರಪ್ಪ, ಶಿಕ್ಷಕರು ಸದಾ ಅಧ್ಯಯನಶೀಲರಾಗಿರಬೇಕು. ತಾನು ಪರಿಪೂರ್ಣನಾಗದೇ ವಿದ್ಯಾರ್ಥಿಗಳಿಗೆ ಆತ ನ್ಯಾಯ ಒದಗಿಸಲಾರ. ಉತ್ತಮ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಸಮಾಜಕ್ಕೆ ಶಿಕ್ಷಕರ ಕೊಡುಗೆ ಹೆಚ್ಚಿದೆ' ಎಂದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲೆಯ ಮುಖ್ಯ ಶಿಕ್ಷಕ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಸಿ.ಹನುಮಂತರಾಯಪ್ಪ, ವೈ.ಸಿ.ನರಸಿಂಹಯ್ಯ ಹಾಗೂ ಶಿಕ್ಷಕ ಬನಪ್ಪ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಶಾಲೆಯ ಹಳೆಯ ವಿದ್ಯಾರ್ಥಿಗಳ ಪರವಾಗಿ ಕೇಶವ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಟಿ.ಎನ್. ಪ್ರಭುದೇವ್, ಪಿ.ಸಿ.ಲಕ್ಷ್ಮೀನಾರಾಯಣ್, ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಸಿ. ವೆಂಕಟೇಶ್, ಸಾಮಾಜಿಕ ಸೇವಾಕರ್ತ ಬಿ.ಸಿ.ಸುರೇಂದ್ರನಾಥ್,ಎಚ್.ಪಿ.ಶಂಕರ್, ಕ್ಷೇತ್ರ ಸಮನ್ವಯಾಧಿಕಾರಿ ಬೈಯಪ್ಪ ರೆಡ್ಡಿ, ಮಾಜಿ ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್, ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ತಿ.ರಂಗರಾಜು, ಹೆಚ್ಚುವರಿ ಮುಖ್ಯ ಶಿಕ್ಷಕ ನಾರಾಯಣಪ್ಪ, ಕೆಪಿಸಿಸಿ ಮಾಜಿ ಸದಸ್ಯ ಎಚ್.ಪಿ.ಷಣ್ಮುಖಾಚಾರ್, ಎಸ್ಡಿಎಂಸಿ ಅಧ್ಯಕ್ಷ ಹನುಮಂತರಾಜು ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.