ಆನೇಕಲ್: ತಾಲ್ಲೂಕಿನಲ್ಲಿ ಹದಗೆ ಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಆದ್ಯತೆ ನೀಡಲಾಗು ವುದು ಎಂದು ಶಾಸಕ ಬಿ.ಶಿವಣ್ಣ ನುಡಿದರು.

ಅವರು ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ 5.80ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಯಿಂದ ಹುಸ್ಕೂರುವರೆಗಿನ 4ಕಿ.ಮೀ. ರಸ್ತೆಯು ಸಂಪೂರ್ಣ ಹಾಳಾಗಿದ್ದು ಜನತೆ ಪ್ರತಿ ನಿತ್ಯ ಪರದಾಡುತ್ತಿದ್ದರು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ಕು ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು ಈ ಭಾಗದ ಖಾಸಗಿ ಕಾರ್ಖಾನೆಗಳ ಮಾಲೀಕರು 1.80ಕೋಟಿ ರೂ.ಹಣವನ್ನು ಹೊಂದಾಣಿಕೆಯಾಗಿ ನೀಡುತ್ತಿದ್ದು ಖಾಸಗಿ ಹಾಗೂ ಸರ್ಕಾರಿ ಸಹಭಾ ಗಿತ್ವದಲ್ಲಿ 5.8ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಿಸಲಾಗುವುದು ಎಂದರು.

ಆನೇಕಲ್ ಚಂದಾಪುರ ರಸ್ತೆ ಅಗಲೀಕರಣಕ್ಕೆ ಸರ್ಕಾರದಲ್ಲಿ ಅನು ದಾನ ಮಂಜೂರಾಗಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗು ವುದು. ಸರ್ಜಾಪುರ ಹೋಬಳಿ 16 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಕಾಮಗಾರಿಯನ್ನು ತ್ವರಿತ ವಾಗಿ ಆರಂಭಿಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮುರಳಿಕೃಷ್ಣ ಮಾತನಾಡಿ, ‘ತಾಲ್ಲೂಕಿನಲ್ಲಿ ಹಲವಾರು ಪ್ರತಿಷ್ಠಿತ ಕಾರ್ಖಾನೆಗಳಿದ್ದರೂ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ. ಶಾಸಕರು ಕೈಗಾರಿಕೆಗಳ ಮಾಲೀಕರೊಂದಿಗೆ ಚರ್ಚಿಸಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸಿಕೊಡಲು ಸಹಕರಿಸಬೇಕು ಎಂದು ನುಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಭಾಕರ ರೆಡ್ಡಿ, ವನಿತಾ ವೆಂಕಟ ಸ್ವಾಮಿ, ಕಾಂಗ್ರೆಸ್ ಮುಖಂಡರಾದ ಮದ್ದೂರಪ್ಪ, ಗಟ್ಟಹಳ್ಳಿ ಸೀನಪ್ಪ, ಪಾಪಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಬಿ.ವೀರಭದ್ರಪ್ಪ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಪ್ರಸನ್ನಕು ಮಾರ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.