ದೊಡ್ಡಬಳ್ಳಾಪುರ: ವೈಜ್ಞಾನಿಕ ಯುಗ ದಲ್ಲಿ ಜಾಗತಿಕ ವಿದ್ಯಮಾನಗಳನ್ನು ಅರಿಯುವ ದಿಸೆಯಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನಾಶೀಲರಾಗಿರ ಬೇಕಿದ್ದು, ಜ್ಞಾನಾ ರ್ಜನೆಗೆ ಪುಸ್ತಕ ಓದುವ ಹವ್ಯಾಸ ಬೆಳೆಸಿ ಕೊಳ್ಳಬೇಕು ಎಂದು ಥಟ್ ಅಂತ ಹೇಳಿ ಕಾರ್ಯ ಕ್ರಮದ ನಿರೂಪಕ ಹಾಗೂ ಲೇಖಕ ಡಾ.ನಾ.ಸೋಮೇಶ್ವರ ಹೇಳಿದರು.

ನಗರದ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ೨೦೧೩-೧೪ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್ ಎನ್‌ಸಿಸಿ ಹಾಗೂ ವಿವಿಧ ಸಂಘಗಳ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಪುಸ್ತಕ ಪ್ರೀತಿ ಮತ್ತು ನಿರಂತರ ಅಧ್ಯಯನ ನಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ. ಇದು ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸಕ್ಕೆ ಸಹಕಾರಿಯಾಗಲಿದೆ ಎಂದು ಪ್ರತಿಪಾದಿಸಿದರು.

ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಗೌ.ಕಾರ್ಯದರ್ಶಿ ಎಂ. ಅಶ್ವತ್ಥಯ್ಯ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಪ್ರಗತಿಗೆ ಪೂರಕವಾದ ಅವಕಾಶ ಬಳಸಿಕೊಂಡು ಮುನ್ನೆಡೆಯಬೇಕು ಎಂದರು.ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು. ಡಿ.ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು.

ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಿ.ಎನ್.ತಿಮ್ಮಣ್ಣ, ಗೌ. ಕಾರ್ಯದರ್ಶಿ ಎ.ಜಿ.ಶ್ರೀನಿವಾಸ ಮೂರ್ತಿ, ಖಜಾಂಚಿ ಪ್ರಭುದೇವಯ್ಯ, ಪ್ರಾಂಶುಪಾಲರಾದ ಎಸ್.ಮಹಾ ಬಲೇಶ್ವರ್, ಬಿ.ಟಿ.ಮಹಾದೇವ್ ಉಪಪ್ರಾಂಶುಪಾಲರಾದ ಎಸ್.ರಾಜಲಕ್ಷ್ಮೀ ಹಾಗೂ ವಿದ್ಯಾಸಂಸ್ಥೆಯ ನಿರ್ದೇಶಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.