ಭಾನುವಾರ, ಡಿಸೆಂಬರ್ 6, 2020
19 °C

ವಿಜಯಪುರ | ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿ ನೇಮಕ ಬೇಡ: ಯತ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸದೇ ಈಗಿರುವ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧ್ಯಕ್ಷರನ್ನೇ ಮುಂದುವರಿಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಈ ಸಂಬಂಧ ಯತ್ನಾಳ ಶನಿವಾರ ಪತ್ರ ಬರೆದಿದ್ದಾರೆ.

ಆಡಳಿತಾಧಿಕಾರಿಗಳ ನೇಮಕದಿಂದ ಗ್ರಾಮಗಳ ಅಭಿವೃದ್ಧಿ ಕಾರ್ಯ ಕುಂಠಿತವಾಗುತ್ತದೆ. ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ತಮ್ಮ ತಮ್ಮ ಗ್ರಾಮಗಳ ಕುಂದುಕೊರತೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನಹರಿಸಲು ಸಮಯಕ್ಕೆ ಸರಿಯಾಗಿ ಆಡಳಿತಾಧಿಕಾರಿಗಳು ಸಂಪರ್ಕಕ್ಕೆ ಸಿಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಂದಿನ ಚುನಾವಣೆಯ ದಿನಾಂಕ ನಿಗದಿಯಾಗುವವರಿಗೆ ಈಗಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರ ಅಧಿಕಾರವನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು