ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕರಣ ರದ್ದು ಕೋರಿ ಬಸವರಾಜನ್‌ ದಂಪತಿ ಹೈಕೋರ್ಟ್‌ಗೆ ಅರ್ಜಿ

Last Updated 4 ಜನವರಿ 2023, 22:45 IST
ಅಕ್ಷರ ಗಾತ್ರ

ಬೆಂಗಳೂರು: ‘ಚಿತ್ರದುರ್ಗದ ಶ್ರೀ ಮುರುಘಾರಾಜೇಂದ್ರ ಬೃಹನ್ಮಠದ (ಎಸ್‌ಜೆಎಂ) ಪೀಠಾಧಿಪತಿ ಶಿವ
ಮೂರ್ತಿ ಮುರುಘಾ ಶರಣರ ವಿರುದ್ಧ ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ನಮ್ಮ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತಂತೆ ಸಲ್ಲಿಸಲಾಗಿರುವ ಕ್ರಿಮಿನಲ್ ಅರ್ಜಿಯಲ್ಲಿ ಮಠದ ಉಸ್ತು
ವಾರಿ ಬಸವಪ್ರಭು ಸ್ವಾಮೀಜಿ ಮತ್ತು ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದ್ದು, ರಜಾಕಾಲದಲ್ಲಿ ಸಲ್ಲಿಸಲಾಗಿದ್ದ ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ರಜಾಕಾಲದ ನಂತರಕ್ಕೆ ಮುಂದೂಡಿತ್ತು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ನಮ್ಮ ಹೆಸರು ಉಲ್ಲೇಖವಾಗಿಲ್ಲ. ಆದರೂ, ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಬಂಧಿಸಿದ್ದರು. ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ನಮ್ಮಿಬ್ಬರನ್ನೂ ತಪ್ಪಾಗಿ ಸಿಲುಕಿಸಲಾಗಿದೆ. ಪೊಲೀಸರ ಈ ನಡೆಯಿಂದ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ನಮಗೆ ಪ್ರಾಪ್ತವಾಗಿ ರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರದ ಹಕ್ಕಿನ ಉಲ್ಲಂಘನೆಯಾಗಿದೆ. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT