ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿಯಲ್ಲೂ ಶೇ 40ರಷ್ಟು ಲಂಚ: ಗುತ್ತಿಗೆದಾರರ ಸಂಘ ಆರೋಪ

₹3,500 ಕೋಟಿ ಬಿಲ್ ಬಾಕಿ– ಗುತ್ತಿಗೆದಾರರ ಸಂಘ ಆರೋಪ
Last Updated 19 ಏಪ್ರಿಲ್ 2022, 19:11 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಮಗಾರಿ ಬಿಲ್‌ನ ಹಣ ಬಿಡುಗಡೆಗೆ ಶೇ 40ರಷ್ಟು ಲಂಚ ಕೊಡಬೇಕಾದ ಸ್ಥಿತಿ ಇದೆ’ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘ ಆರೋಪಿಸಿದೆ.

ಬಿಬಿಎಂಪಿ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಿಗೆ 2019ರ ನವೆಂಬರ್‌ನಿಂದ ₹3,500 ಕೋಟಿ ಬಿಲ್ ಬಾಕಿ ಉಳಿದಿದೆ. ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ‍‍ಗುತ್ತಿಗೆದಾರರು ಎಚ್ಚರಿಸಿದ್ದಾರೆ.

‘ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ಗುತ್ತಿಗೆದಾರರಿಗೆ ₹300 ಕೋಟಿ ಬಾಕಿ ಬರಬೇಕಿದೆ. ಈ ಸಂಬಂಧ ಸರ್ಕಾರ ಮತ್ತು ಮುಖ್ಯ ಆಯುಕ್ತರ ಜತೆ ಇನ್ನೂ ಮಾತುಕತೆ ನಡೆಸುತ್ತಿದ್ದೇವೆ. ಸಂಘವು 2 ಸಾವಿರಕ್ಕೂ ಹೆಚ್ಚು ಗುತ್ತಿಗೆದಾರರನ್ನು ಹೊಂದಿದ್ದು, ಅದರಲ್ಲಿ 200ರಿಂದ 300 ಗುತ್ತಿಗೆದಾರರು ₹10,000 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ. ಮಾತುಕತೆ ವಿಫಲವಾದರೆ ಪ್ರತಿಭಟನೆ ಅನಿವಾರ್ಯ’ ಎಂದು ಸಂಘ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT