ಮುಗಳಖೋಡ: ‘ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ತಮ್ಮ ಕಲಿಕೆಗೆ ಪೂರಕವಾಗಿ ಬಳಸಿಕೊಳ್ಳಬೇಕೇ ಹೊರತು, ದುರ್ಬಳಕೆ ಮಾಡಿಕೊಂಡು ಬದುಕಿನಲ್ಲಿ ದಾರಿ ತಪ್ಪಬಾರದು’ ಎಂದು ಡಾ.ಎಸ್.ಎಸ್. ಕಲ್ಲೊಳ್ಳಿ ಕಿವಿಮಾತು ಹೇಳಿದರು.
ಪಟ್ಟಣದ ಡಾ.ಸಿ.ಬಿ. ಕುಲಿಗೋಡ ಪದವಿ ಮಹಾವಿದ್ಯಾಲಯದಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.