ಬುಧವಾರ, ಅಕ್ಟೋಬರ್ 21, 2020
26 °C

ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ‘ಸಂಕಲ್ಪ ಯಾತ್ರೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಸುವರ್ಣಸೌಧದ ಎದುರು ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮೂಡಲಗಿಯ ಶ್ರೀಮಂತ ಶಿವಯೋಗಿ ಮಹಾರಾಜರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಸಂಕಲ್ಪ ಯಾತ್ರೆ’ ಭಾನುವಾರ ನಗರ ತಲುಪಿತು.

ನೂರಾರು ಮಂದಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಲಕ್ಕಣ್ಣ ಸಂಸುದ್ದಿ ಮಾತನಾಡಿ, ‘ದೆಹಲಿಯ ಸಂಸತ್‌ ಭವನದ ಎದುರು ರಾಣಿ ಚನ್ನಮ್ಮನ ಪ್ರತಿಮೆ ಸ್ಥಾಪಿಸಲಾಗಿದೆ. ಅಂತೆಯೇ ಸುವರ್ಣಸೌಧದ ಎದುರು ಚನ್ನಮ್ಮ ಹಾಗೂ ರಾಯಣ್ಣ ಪ್ರತಿಮೆ ಸ್ಥಾಪಿಸಬೇಕು. ಬೇಡಿಕೆ ಈಡೇರುವವೆರೆಗೂ ಹೋರಾಟ ಮುಂದುವರಿಯಲಿದೆ’ ಎಂದು ತಿಳಿಸಿದರು.

ಮುಖಂಡ ಭೀಮಪ್ಪ ಗಡಾದ, ‘ಚನ್ನಮ್ಮ ಹಾಗೂ ರಾಯಣ್ಣ ಇಬ್ಬರೂ ಆದರ್ಶಪ್ರಾಯವಾಗಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಮಹನೀಯರು. ಅವರ ಪ್ರತಿಮೆ ಸ್ಥಾಪನೆ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದರು.

ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು