ಜಾರಕಿಹೊಳಿ ಸೋದರರನ್ನು ಪಕ್ಷದಿಂದ ಹೊರಹಾಕಿ: ಶಂಕರ ಮುನವಳ್ಳಿ ಒತ್ತಾಯ

7

ಜಾರಕಿಹೊಳಿ ಸೋದರರನ್ನು ಪಕ್ಷದಿಂದ ಹೊರಹಾಕಿ: ಶಂಕರ ಮುನವಳ್ಳಿ ಒತ್ತಾಯ

Published:
Updated:

ಬೆಳಗಾವಿ: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದಾಗಿ ಬ್ಲಾಕ್‌ಮೇಲ್‌ ಮಾಡುತ್ತಿರುವ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಸಹೋದರರನ್ನು ಪಕ್ಷದಿಂದ ಹೊರಹಾಕಿ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 14 ಜನ ಶಾಸಕರ ಜೊತೆ ಪಕ್ಷ ತೊರೆಯುವುದಾಗಿ ಬೆದರಿಕಯೊಡ್ಡುತ್ತಿರುವವರನ್ನು ಏಕೆ ಇಟ್ಟುಕೊಂಡಿದ್ದೀರಿ? ಅವರನ್ನು ಕಿತ್ತುಹಾಕಲು ಕೆಪಿಸಿಸಿ ಅಧ್ಯಕ್ಷ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌ ಅವರಿಗೆ ಧೈರ್ಯ ಇಲ್ಲವೇ ಎಂದು ಪ್ರಶ್ನಿಸಿದರು.

ನಿಯಂತ್ರಿಸದಿದ್ದರೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ

ಜಾರಕಿಹೊಳಿ ಸಹೋದರರ ಇಂತಹ ನಡೆಯಿಂದಾಗಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ. ಪಕ್ಷ ಸಂಘಟನೆಯಲ್ಲಿ ಹಿನ್ನಡೆಯಾಗುತ್ತದೆ. ಕೂಡಲೇ ಜಾರಕಿಹೊಳಿ ಸಹೋದರರನ್ನು ಪಕ್ಷದ ಹೈಕಮಾಂಡ್‌ ನಿಯಂತ್ರಿಸಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಲಿದೆ ಎಂದು ಅವರು ಎಚ್ಚರಿಸಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪರಿಶ್ರಮ ಪಟ್ಟು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಪಕ್ಷ ಬೆಳೆಸಲು ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ಪ್ರಶಂಶಿಸಿದ ಅವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಡಿ.ಕೆ. ಶಿವಕುಮಾರ್‌ ಕೂಡ ಬೆಳಗಾವಿಯಲ್ಲಿ ಪಕ್ಷ ಕಟ್ಟಲು ಸಾಕಷ್ಟು ದುಡಿದಿದ್ದಾರೆ. ಅವರು ಜಿಲ್ಲೆಗೆ ಏಕೆ ಬರಬಾರದು? ಅವರಿಗೆ ಬರಬೇಡಿ ಎಂದು ಹೇಳಲು ಜಾರಕಿಹೊಳಿ ಸಹೋದರರು ಯಾರು ಎಂದು ಪ್ರಶ್ನಿಸಿದರು.

ಕಾರ್ಯಕರ್ತರನ್ನು ಜಾರಕಿಹೊಳಿ ಸಹೋದರರು ಬೆದರಿಸಲು ಪ್ರಯತ್ನಿಸುತ್ತಾರೆ. ಆದರೆ, ನಾವು ಹೆದರುವುದಿಲ್ಲ. ನಾವು ಅವರ ಕೆಲಸಗಾರರೂ ಅಲ್ಲ. ಪಕ್ಷಕ್ಕಾಗಿ ದುಡಿದಿದ್ದೇವೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 6

  Happy
 • 1

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !