ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉಡಾಳ್ ಕಂಪನಿ’ಗೆ ಲಕ್ಷ್ಮಿ ಕ್ಲ್ಯಾಪ್

Last Updated 18 ಜುಲೈ 2021, 14:40 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಶಿಂಧೊಳ್ಳಿ ಇಂಡಾಲ ನಗರದ ಗಣಪತಿ ದೇವಸ್ಥಾನದಲ್ಲಿ ‘ಉಡಾಳ್ ಕಂಪನಿ’ ಚಲನಚಿತ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕ್ಲ್ಯಾಪ್ ಮಾಡುವ ಮೂಲಕ ಭಾನುವಾರ ಚಾಲನೆ ನೀಡಿದರು.

ಈ ಚಲನಚಿತ್ರಕ್ಕೆ ನಿರಂಜನ ಸ್ವಾಮಿ ನಿರ್ಮಾಪಕರಾಗಿದ್ದು, ನಿರ್ದೇಶನದ ಜವಾಬ್ದಾರಿಯನ್ನು ಸಂಜಯ ಎಚ್. ವಹಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಲನಚಿತ್ರದ ಶೂಟಿಂಗ್ ಪ್ರಾರಂಭವಾಗುತ್ತಿದ್ದು, ಉತ್ತರ ಕರ್ನಾಟಕದಲ್ಲೇ ಸಂಪೂರ್ಣವಾಗಿ ನಡೆಯಲಿದೆ.

‘ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಜನ ಕಲಾವಿದರಿದ್ದು, ಅವಕಾಶಗಳು ಸಿಗದೆ ವಂಚಿತರಾಗುತ್ತಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ, ನಾವು ಯಾವ ಕ್ಷೇತ್ರದಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ತೋರಿಸಿಕೊಡಬೇಕಿದೆ’ ಎಂದು ಹೇಳಿದರು.

ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಮಹಾಂತೇಶ ಮತ್ತಿಕೊಪ್ಪ, ಕೃಷ್ಣ ನಾಯ್ಕರ, ರಂಜತ ತಿಗಡಿ, ಮಂಜು, ಅನಿಲ ಹುದಲಿ, ರವಿ, ಮಹಾಂತೇಶ ರಣಗಟ್ಟಿಮಠ, ಮಹೇಶ ಶಾಸ್ತ್ರಿ, ಪ್ರವೀಣ ಕಣಗಲೆ, ಉಮೇಶ ಬಡಿಗೇರ, ಬಸವರಾಜ ಹಮ್ಮಿಣಿ, ಈರಣ್ಣ ಉಮ್ರಾಣಿ, ಬಸಪ್ಪ ಹುದಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT