ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಂಕಂಚಿ: ಎಸ್ಸೆಸ್ಸೆಲ್ಸಿಯ 10 ವಿದ್ಯಾರ್ಥಿಗಳಿಗೆ ಕೋವಿಡ್

Last Updated 14 ಜನವರಿ 2022, 15:14 IST
ಅಕ್ಷರ ಗಾತ್ರ

ಅಥಣಿ: ‘ತಾಲ್ಲೂಕಿನ ಯಂಕಂಚಿ ಗ್ರಾಮದ ಪ್ರೌಢಶಾಲೆಯ 10 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ’ ಎಂದು ಬಿಇಒ ಗೌಡಪ್ಪ ಖೋತ ತಿಳಿಸಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಜ.12ರಂದು ಆ ಪ್ರೌಢಶಾಲೆಯ 65 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿತ್ತು. 35 ವಿದ್ಯಾರ್ಥಿಗಳ ವರದಿ ಬರುವುದು ಬಾಕಿ ಇದೆ’ ಎಂದು ಮಾಹಿತಿ ನೀಡಿದರು.

‘ಸೋಂಕು ದೃಢಪಟ್ಟ ವಿದ್ಯಾರ್ಥಿಗಲ್ಲಿ ಹೆಚ್ಚಿನ ರೋಗ ಲಕ್ಷಣಗಳು ಇಲ್ಲ. ಅವರೆಲ್ಲರಿಗೂ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಸದ್ಯ ರಜೆ ನೀಡಲಾಗಿದೆ‘ ಎಂದು ಹೇಳಿದರು.

‘ತಾಲ್ಲೂಕಿನ ಯಲಿಹಡಲಗಿ ಗ್ರಾಮದ ಶಿಕ್ಷಕರೊಬ್ಬರಿಗೆ ಕೂಡ ಸೋಂಕು ದೃಢಪಟ್ಟಿದೆ. ಅವರೂ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT