ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಬೆಳೆದಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Last Updated 26 ಮಾರ್ಚ್ 2021, 16:23 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಬಳವಾಡ ಗ್ರಾಮ ವ್ಯಾಪ್ತಿಯಲ್ಲಿ ಕಬ್ಬಿನ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಹಾಗೂ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವ್ಯಕ್ತಿಗೆ ಇಲ್ಲಿನ 2ನೇ ವಿಶೇಷ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಮೌಲಾಸಾಬ ಇಮಾಮಸಾಬ ನದಾಫ ಅಲಿಯಾಸ್ ಪಿಂಜಾರ (55) ಶಿಕ್ಷೆಗೆ ಗುರಿಯಾದವರು. ಅವರ ಜಮೀನಿನ ಮೇಲೆ ದಾಳಿ ಮಾಡಿದ್ದ ಪೊಲೀಸರು, ಅಲ್ಲಿ ಬೆಳೆಗಿದ್ದ ₹ 48ಸಾವಿರ ಮೌಲ್ಯದ 16 ಕೆ.ಜಿ. 7 ಗ್ರಾಂ. ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದರು. ₹ 2.88 ಲಕ್ಷ ಮೌಲ್ಯದ 24 ಕೆ.ಜಿ. ತೂಕದ ಒಣ ಗಾಂಜಾವನ್ನು ಶೆಡ್‌ನಲ್ಲಿ ಗೋಣಿಚೀಲದಲ್ಲಿ ಸಂಗ್ರಹಿಸಿಟ್ಟಿದ್ದನ್ನು ವಶಪಡಿಸಿಕೊಂಡಿದ್ದರು. ಇಮಾಮಸಾಬ ಅವರನ್ನು ಬಂಧಿಸಿದ್ದ ಆಗಿನ ಡಿಸಿಆರ್‌ಬಿ ಇನ್‌ಸ್ಪೆಕ್ಟರ್ ಶಂಕರಗೌಡ ಪಾಟೀಲ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ. ನಂಜುಂಡಯ್ಯ ಶಿಕ್ಷೆ ವಿಧಿಸಿದ್ದಾರೆ. ದಂಡ ಕಟ್ಟಲು ತಪ್ಪಿದಲ್ಲಿ 2 ತಿಂಗಳು ಸಾದಾ ಶಿಕ್ಷೆ ವಿಧಿಸುವಂತೆ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಕೆ. ಮಾಹುರಕರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT