ಕೃಷ್ಣಾ ನದಿಗೆ ಹರಿದುಬರುತ್ತಿರುವ 1.08 ಲಕ್ಷ ಕ್ಯುಸೆಕ್‌ ನೀರು

7

ಕೃಷ್ಣಾ ನದಿಗೆ ಹರಿದುಬರುತ್ತಿರುವ 1.08 ಲಕ್ಷ ಕ್ಯುಸೆಕ್‌ ನೀರು

Published:
Updated:

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಮಳೆಯ ಅಬ್ಬರ ಸಂಪೂರ್ಣವಾಗಿ ತಗ್ಗಿದೆ. ನೆರೆಯ ಮಹಾರಾಷ್ಟ್ರದಲ್ಲೂ ಮಳೆ ಕಡಿಮೆಯಾಗಿದೆ. ಆದರೆ ಕೃಷ್ಣಾ ನದಿಗೆ ಹರಿದುಬರುತ್ತಿದ್ದ ನೀರಿನ ಹರಿವು ಮುಂದುವರಿದಿದೆ. ಚಿಕ್ಕೋಡಿ ಮೂಲಕ ರಾಜ್ಯದೊಳಗೆ ಪ್ರವೇಶಿಸುವ ಕೃಷ್ಣಾ ನದಿಗೆ 1.08 ಲಕ್ಷ ಕ್ಯುಸೆಕ್‌ ನೀರು ಹರಿದುಬಂದಿದೆ. ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಹಿಪ್ಪರಗಿ ಹಾಗೂ ಆಲಮಟ್ಟಿ ಜಲಾಶಯದಿಂದ 1.35 ಲಕ್ಷ ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ.

ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳಿ– ಯಡೂರು, ಜತ್ರಾಟ– ಭೀವಶಿ, ಅಕ್ಕೋಳ– ಸಿದ್ನಾಳ, ಕಾರದಗಾ– ಭೋಜ, ಮಲ್ಲಿಕವಾಡ– ದತ್ತವಾಡ ಹಾಗೂ ಕುನ್ನೂರ– ಭೋಜವಾಡಿ ಸೇತುವೆಗಳು ಜಲಾವೃತಗೊಂಡಿವೆ. ಪರ್ಯಾಯ ಮಾರ್ಗಗಳ ಮೂಲಕ ಗ್ರಾಮಸ್ಥರು ಸಂಚರಿಸುತ್ತಿದ್ದಾರೆ.

 

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !