ಭಾನುವಾರ, ಜೂನ್ 13, 2021
29 °C

ಸ್ಮಶಾನದಲ್ಲಿ ಆರುತ್ತಿಲ್ಲ ಚಿತೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಸದಾಶಿವ ನಗರ ಸ್ಮಶಾನದಲ್ಲಿ ಚಿತೆ ಆರುತ್ತಲೇ ಇಲ್ಲ. ಅಲ್ಲಿನ ಆವರಣವು ಕೋವಿಡ್ 2ನೇ ಅಲೆಯ ತೀವ್ರತೆಗೆ ನಿತ್ಯವೂ ಸಾಕ್ಷಿ ಆಗುತ್ತಲೇ  ಇದೆ. ಬುಧವಾರ ಸಂಜೆವರೆಗೆ ಅಲ್ಲಿ ವಿವಿಧ ಸಮಸ್ಯೆಗಳಿಂದ ನಿಧನರಾದ 11 ಮಂದಿಯ ಮೃತಹದೇಹಗಳ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಐವರು ಕೋವಿಡ್‌ನಿಂದ ಮೃತರಾದವರು ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಐಸಿಯು, ವೆಂಟಿಲೇಟರ್, ಆಮ್ಲಜನಕ ಹಾಸಿಗೆ ಸಿಗದೆ ಮರಣ ಪ್ರಮಾಣ ಹೆಚ್ಚುತ್ತಿದೆ. ರ‍್ಯಾಪಿಡ್‌, ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ಕೋವಿಡ್ ದೃಢಪಟ್ಟವರು ಮೃತರಾದಾಗ ಅದನ್ನು ಕೋವಿಡ್‌ನಿಂದ ಸಾವು ಎಂದು ಪರಿಗಣಿಸಲಾಗುತ್ತದೆ.  ಸ್ಕ್ಯಾನ್ ಮಾಡಿಸಿದಾಗ ಕೋವಿಡ್ ದೃಢಪಟ್ಟು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾದರೆ ಅದನ್ನು ಕೋವಿಡ್ ಸಾವು ಎಂದು ಪರಿಗಣಿಸಲಾಗುವುದಿಲ್ಲ ಎನ್ನುವುದು ಅಧಿಕಾರಿಗಳ ಹೇಳಿಕೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು