ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 11 ಮಂದಿ ಕೋವಿಡ್–19ರಿಂದ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

Last Updated 4 ಮೇ 2020, 10:49 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್- 19 ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.

ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬಿಡುಗಡೆ ಹೊಂದಿದವರ ವಿವರ: ಕ್ಯಾಂಪ್ ಪ್ರದೇಶ - ಪಿ-355, ಪಿ-356, ಪಿ-358 ಹಾಗೂ ಪಿ-359. ಕುಡಚಿ- ಪಿ-296, ಪಿ-297, ಪಿ-299, ಪಿ-301, ಸಂಕೇಶ್ವರ- ಪಿ-293, ಯಳ್ಳೂರ ಪಿ-295 ಹಾಗೂ ಹಿರೇಬಾಗೇವಾಡಿ ಪಿ-193 ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 73 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT