ಬುಧವಾರ, ಆಗಸ್ಟ್ 17, 2022
24 °C

ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಐಡಿಯಾ ಅಭಿವೃದ್ಧಿ, ಮೌಲ್ಯಮಾಪನ ಮತ್ತು ಪ್ರಯೋಗಾಲಯ ಸ್ಥಾಪಿಸಲು ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನವನ್ನು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮಂಜೂರು ಮಾಡಿದೆ.

‘ರಾಷ್ಟ್ರ ಮಟ್ಟದ ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯಲ್ಲಿ 210 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 49 ಕಾಲೇಜುಗಳಿಗೆ ಮಾತ್ರ ಇಷ್ಟು ದೊಡ್ಡ ಪ್ರಮಾಣದ ಅನುದಾನ ಲಭಿಸಿದೆ. ಇದು ನಮ್ಮ ಕಾಲೇಜು ನಿರ್ವಹಿಸುವ ಗುಣಮಟ್ಟದ ಮಾನದಂಡಗಳನ್ನು ಸಾಬೀತುಪಡಿಸಿದೆ’ ಎಂದು ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ತಿಳಿಸಿದ್ದಾರೆ.

‘ಈ ಭಾಗದ ಎಲ್ಲ ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನಗಳು, ಎಂಜಿನಿಯರಿಂಗ್ ಮತ್ತು ಗಣಿತ (ಎಸ್‌ಟಿಇಎಂ) ಮೂಲ ಅಂಶಗಳ ಕಡೆಗೆ ಉತ್ತೇಜಿಸುವುದು ಹಾಗೂ ಮಾಡುತ್ತಾ ಕಲಿಯುವುದಕ್ಕೆ ಪ್ರೋತ್ಸಾಹಿಸುವುದು ಪ್ರಯೋಗಾಲಯದ ಉದ್ದೇಶವಾಗಿದೆ. ಬಹುಶಿಸ್ತೀಯ ವಿಷಯಗಳಲ್ಲಿ ಸಂಶೋಧನೆ ಮಾಡುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳ ಅನುಕೂಲವಾಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಯೋಗಾಲಯ ಮಂಜೂರಾಗಲು ಶ್ರಮಿಸಿದ ಪ್ರಾಚಾರ್ಯ, ಡಾ.ಅಮಿತ್‌, ಡಾ.ಅರುಣ್ ಹಾಗೂ ಬೋಧಕರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಸ್.ಸಿ. ಮೆಟಗುಡ್ ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು