ಬೆಳಗಾವಿ: ಇಲ್ಲಿನ 12 ಮಂದಿ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್–19 ದೃಢಪಟ್ಟಿದೆ.

ಮೇ 2ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಚುನಾವಣಾ ಆಯೋಗದ ನಿಯಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಪತ್ರಕರ್ತರನ್ನು ಆರ್.ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ವಾರ್ತಾ ಭವನದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯು ಏ.29ರಂದು 70 ಮಂದಿಯಿಂದ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಸಂಗ್ರಹಿಸಿದ್ದರು. ಶುಕ್ರವಾರ ಹಾಗೂ ಶನಿವಾರ ವರದಿ ಬಂದಿವೆ. ಇವರಲ್ಲಿ 12 ಮಂದಿಗೆ ಪಾಸಿಟಿವ್ ಬಂದಿದೆ. ಇವರಲ್ಲಿ 11 ಮಂದಿಗೆ ಕೋವಿಡ್ನ ಯಾವುದೇ ಲಕ್ಷಣಗಳಿಲ್ಲ.

‘ಆದಾಗ್ಯೂ ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರು ಹೋಂ ಐಸೋಲೇಷನ್ ಇರಬೇಕಾಗುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಅಥವಾ ಸಿಬ್ಬಂದಿ ಅವರನ್ನು ಸಂಪರ್ಕಿಸಿ ಔಷೋಧಪಚಾರ ಮಾಡಲಿದ್ದಾರೆ. ವಿಷಯವನ್ನು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗಿದೆ. ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ’ ಎಂದು ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.