ಶನಿವಾರ, ಸೆಪ್ಟೆಂಬರ್ 26, 2020
21 °C

120 ಕೆ.ಜಿ. ಗಾಂಜಾ ಗಿಡ ವಶ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ರಾಯಬಾಗ ತಾಲ್ಲೂಕು ಸುಟ್ಟಟ್ಟಿ ಗ್ರಾಮದ ಜಮೀನೊಂದರಲ್ಲಿ ಕಬ್ಬಿನ ಬೆಳೆಯ ಮಧ್ಯದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಕುಡಚಿ ಠಾಣೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಲಕ್ಕಪ್ಪ ಸತ್ಯಪ್ಪ ಖೋತ ಮತ್ತು ಲಕ್ಷ್ಮಣ ಲಕ್ಕಪ್ಪ ಖೋತ ಬಂಧಿತ ಆರೋಪಿಗಳು.

‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. 120 ಕೆ.ಜಿ. ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್‌ಐ ಶಿವರಾಜ ಧರಿಗೋಣ, ಸಿಬ್ಬಂದಿ ಪಿ.ಎಲ್. ಖವಟಕೊಪ್ಪ, ಕೆ.ಆರ್. ಸಾಳೋಂಕೆ, ಆನಂದ ತೇರದಾಳ, ಎಚ್.ಎಸ್. ಗುಡ್ಡದ, ಆನಂದ ಪೂಜೇರಿ, ಎ.ಎ. ಮುದ್ನಾಳ, ಎಂ.ಕೆ. ಯಲ್ಲಟ್ಟಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು