ಗುರುವಾರ , ಮೇ 13, 2021
40 °C

ಬಿಮ್ಸ್‌: 14 ವಿದ್ಯಾರ್ಥಿಗಳಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್‌)ಯ 14 ವಿದ್ಯಾರ್ಥಿಗಳಿಗೆ ಕೋವಿಡ್–19 ದೃಢಪಟ್ಟಿದೆ.

‘ಕಾಲೇಜಿನ 150 ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆ ನಡೆಸಲಾಯಿತು. ಇವರಲ್ಲಿ 14 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ರೋಗ ಲಕ್ಷ್ಮಣಗಳು  ಇರುವವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಣವಿಲ್ಲದಿದ್ದರೂ ಕೋವಿಡ್ ದೃಢಪಟ್ಟಿರುವ ವಿದ್ಯಾರ್ಥಿಗಳು ಹೋಂ ಐಷೊಲೇಷನ್‌ನಲ್ಲಿದ್ದಾರೆ. ನೆಗೆಟಿವ್ ಬಂದಿರುವ ವಿದ್ಯಾರ್ಥಿಗಳನ್ನು ಅವರವರ ಊರುಗಳಿಗೆ ಕಳುಹಿಸಲಾಗಿದೆ’ ಎಂದು ವೈದ್ಯಕೀಯ ನಿರ್ದೇಶಕ ಡಾ.ವಿನಯ್‌ ದಾಸ್ತಿಕೊಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಮಾರುಕಟ್ಟೆ ಬಂದ್

ಬೆಳಗಾವಿ: ‘ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಗಂಣದಲ್ಲಿರುವ ತರಕಾರಿ ಮಾರುಕಟ್ಟೆಯನ್ನು, ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಕರ್ಫ್ಯೂ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು’ ಎಂದು ಕಾರ್ಯದರ್ಶಿ ಕೋಡಿಗೌಡ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು