15 ಎಚ್‌1ಎನ್‌1 ಪ್ರಕರಣ ಪತ್ತೆ

7

15 ಎಚ್‌1ಎನ್‌1 ಪ್ರಕರಣ ಪತ್ತೆ

Published:
Updated:

ಬೆಳಗಾವಿ: ಜಿಲ್ಲೆಯಲ್ಲಿ 15 ಎಚ್‌1ಎನ್‌1 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಎ.ಎಂ. ತುಕ್ಕಾರ ತಿಳಿಸಿದರು.

ಬೆಳಗಾವಿ, ಅಥಣಿ ಸೇರಿದಂತೆ ಬಹುತೇಕ ಎಲ್ಲ ತಾಲ್ಲೂಕುಗಳಲ್ಲಿ ಪ್ರಕರಣಗಳು ಕಂಡುಬಂದಿವೆ. ಹಲವು ದಿನಗಳಿಂದ ತೀವ್ರ ನೆಗಡಿ, ಕೆಮ್ಮು, ಜ್ವರ, ವಾಂತಿಭೇದಿಯಿಂದ ಬಳಲುತ್ತಿದ್ದ ಸುಮಾರು 71 ಜನರ ಕಫ ಹಾಗೂ ಸಿಂಬಳದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಮಂಗಳೂರಿನ ಸೂಕ್ಷ್ಮಾನುಜೀವಿ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದ ನಂತರ 15 ಪ್ರಕರಣಗಳು ದೃಢಪಟ್ಟವು ಎಂದು ಹೇಳಿದರು.

ಬಾಧಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಔಷಧಗಳ ಕೊರತೆಯಿಲ್ಲ. ತೀವ್ರ ನಿಗಾ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಸಂಗ್ರಹ ಮಾಡಿ ಇಟ್ಟುಕೊಳ್ಳಲಾಗಿದೆ ಎಂದು ನುಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !