ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನಿಂದ ಬೆಳಗಾವಿಗೆ ಬಂದಿದ್ದ 15 ಮಂದಿಯ ವರದಿಯೂ ನೆಗೆಟಿವ್: ಡಿ.ಸಿ

Last Updated 30 ಡಿಸೆಂಬರ್ 2020, 8:22 IST
ಅಕ್ಷರ ಗಾತ್ರ

ಬೆಳಗಾವಿ: ‘ಬ್ರಿಟನ್‌ನಿಂದ ಜಿಲ್ಲೆಗೆ 15 ಮಂದಿ ಬಂದಿದ್ದಾರೆ. ಅವರೆಲ್ಲರನ್ನೂ ಕೋವಿಡ್–19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘10 ಮಂದಿ ನಗರದಲ್ಲಿದ್ದಾರೆ. ಉಳಿದವರು ಜಿಲ್ಲೆಯ ಬೇರೆ ಬೇರೆ ತಾಲ್ಲೂಕುಗಳ ಅವರ ಮನೆಯಲ್ಲಿದ್ದಾರೆ. ಅವರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗದರ್ಶನ ನೀಡಲಾಗಿದೆ. ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚಿಸಿದ್ದೇವೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಗಳು ಕಡಿಯಾಗಿವೆ. ಹಾಗೆಂದು ಜನರು ನಿರ್ಲಕ್ಷ್ಯ ವಹಿಸಬಾರದು. ಅಂತರ ಕಾಯ್ದುಕೊಳ್ಳಬೇಕು. ಮಾಸ್ಲ್‌ ಧರಿಸುವುದನ್ನು ಬಿಡಬಾರದು’ ಎಂದು ಕೋರಿದರು.

‘ಮಹಾನಗರ ಪಾಲಿಕೆಯ ಎದುರು ಅನುಮತಿ ಪಡೆಯದೆ ಧ್ವಜ ಸ್ತಂಭ ಸ್ಥಾಪಿಸಿ, ಕನ್ನಡ ಬಾವುಟ ಹಾರಿಸಲಾಗಿದೆ. ಈ ಕುರಿತು ಚರ್ಚಿಸಲು ಕನ್ನಡ ಹೋರಾಟಗಾರರನ್ನು ಕರೆದಿದ್ದೆವು. ಆದರೆ ಅವರು ಮಾತುಕತೆಗೆ ಬಂದಿಲ್ಲ. ಶೀಘ್ರದಲ್ಲಿಯೇ ಈ ಕುರಿತು ಸಭೆ ಕರೆದು ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT