ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಖಾಸಗಿ ಕಾಲೇಜಿನ ಬಸ್‌–ಹಾಲಿನ ವಾಹನ ಅಪಘಾತ: 16 ವಿದ್ಯಾರ್ಥಿಗಳಿಗೆ ಗಾಯ

Published 14 ಜೂನ್ 2024, 16:15 IST
Last Updated 14 ಜೂನ್ 2024, 16:15 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಕಾಲೇಜಿನ ಬಸ್‌ ಮತ್ತು ಹಾಲು ಸಾಗಿಸುತ್ತಿದ್ದ ವಾಹನದ ಮಧ್ಯೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 16 ವಿದ್ಯಾರ್ಥಿಗಳಿಗೆ ಸಣ್ಣ–ಪುಟ್ಟ ಗಾಯವಾಗಿವೆ.

‘ಮಹಾರಾಷ್ಟ್ರದ ಕೊಲ್ಹಾಪುರದ ಡಿ.ವೈ.ಪಟೇಲ್ ಕೃಷಿ ಕಾಲೇಜಿನ 40 ವಿದ್ಯಾರ್ಥಿಗಳು ಧಾರವಾಡಕ್ಕೆ ಹೋಗಿದ್ದರು. ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಮರಳುವಾಗ ಭೂತರಾಮನಹಟ್ಟಿಯಲ್ಲಿ ರಾಣಿ ಚನ್ನಮ್ಮ ಕಿರುಮೃಗಾಲಯ ವೀಕ್ಷಿಸಿ, ಕೊಲ್ಹಾಪುರದತ್ತ ಸಾಗುತ್ತಿದ್ದರು. ಆಗ ಹಾಲು ಸಾಗಿಸುತ್ತಿದ್ದ ವಾಹನ ಡಿಕ್ಕಿ ಹೊಡೆದು, 16 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ನಗರ ಪೊಲೀಸ್‌ ಉಪ ಆಯುಕ್ತೆ(ಅಪರಾಧ ಮತ್ತು ಸಂಚಾರ ವಿಭಾಗ) ಪಿ.ವಿ.ಸ್ನೇಹಾ ‘ಪ್ರಜಾವಾಣಿ’ಗೆ ತಿಳಿಸಿದರು.

ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT