ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 172 ಮಂದಿಗೆ ಕೋವಿಡ್ ದೃಢ

56 ಜನರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
Last Updated 2 ಆಗಸ್ಟ್ 2020, 14:20 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 172 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,628ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ 54 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸಿದೆ ಸಾವಿಗೀಡಾಗಿದ್ದಾರೆ. ಜುಲೈ 30ರಂದು ದಾಖಲಾಗಿದ್ದ ಅವರು 31ರಂದು ಮೃತರಾಗಿದ್ದಾರೆ. ಅವರಿಗೆ ಕೆಮ್ಮು ಹಾಗೂ ಉಸಿರಾಟದ ತೊಂದರೆ ಇತ್ತು. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ 56 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ತಾಲ್ಲೂಕಿನಲ್ಲಿ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಉಳಿದಂತೆ ಸವದತ್ತಿ, ಬೈಲಹೊಂಗಲ, ಅಥಣಿ, ರಾಯಬಾಗ, ಹುಕ್ಕೇರಿ, ಗೋಕಾಕ, ಖಾನಾಪುರ, ರಾಮದುರ್ಗ ತಾಲ್ಲೂಕುಗಳಲ್ಲಿ ಸೋಂಕು ದೃಢಪಟ್ಟಿದ್ದು ವರದಿಯಾಗಿದೆ. ಸೋಂಕಿತರು ಇದ್ದ ಮನೆಗಳ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ.

9 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. 492 ಮಾದರಿಗಳ ಪರೀಕ್ಷಾ ವರದಿ ಬರುವುದು ಬಾಕಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT