ಭಾನುವಾರ, ಸೆಪ್ಟೆಂಬರ್ 20, 2020
22 °C

ದಕ್ಷಿಣ ಮತಕ್ಷೇತ್ರಕ್ಕೆ 1,748 ಮನೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ದಕ್ಷಿಣ ಮತ ಕ್ಷೇತ್ರದ ವಸತಿರಹಿತ ಬಡ ಕುಟುಂಬಗಳಿಗೆ ‘ಸರ್ವರಿಗೂ ಸೂರು ಯೋಜನೆ’ಯಲ್ಲಿ 1748 ಮನೆಗಳು ಮಂಜೂರಾಗಿವೆ.

‘ಕ್ಷೇತ್ರಕ್ಕೆ ರಾಜ್ಯದಲ್ಲಿಯೇ ಅತಿ ಹೆಚ್ಚಿನ ಗುರಿ ಪಡೆಯಲಾಗಿದೆ. ಇಲ್ಲಿ ಬಹಳಷ್ಟು ಜನರು ವಸತಿ ರಹಿತರಾಗಿದ್ದು ಅವರಿಗೆ ಸೂರು ಒದಗಿಸಲು ಕ್ರಮ ವಹಿಸಲಾಗಿದೆ. 2018ರಿಂದಲೂ ಆಗಾಗ ಮನವಿಗಳನ್ನು ಸಲ್ಲಿಸಿದ್ದೆ. 5ಸಾವಿರ ಮನೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಹಾಗೂ ವಸತಿ ಸಚಿವರಿಗೆ ಒತ್ತಾಯಿಸಿದ್ದೆ. ಈಗ ಮಂಜೂರಾದ ಮನೆಗಳ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ನವೆಂಬರ್ ವೇಳೆಗೆ ಆರಂಭಿಸುವ ಉದ್ದೇಶವಿದೆ’ ಎಂದು ಮಾಹಿತಿ ನೀಡಿದ್ದಾರೆ.

‌‘ನಗರದಲ್ಲಿರುವ 10 ಪ್ರದೇಶಗಳನ್ನು ‘ಘೋಷಿತ ಕೊಳಗೇರಿ’ಗಳೆಂದು ಪರಿಗಣಿಸುವಂತೆ ಪ್ರಸ್ತಾವ ಸಿದ್ದಪಡಿಸಲಾಗಿದೆ. ಅದನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಿ, ಮೂಲಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು