ಗೋಕಾಕ: ಸಮಾಜ ಬಾಂಧವರು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಬಣಜಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಂಸದ ಜಗದೀಶ ಶೆಟ್ಟರ ಕರೆ ನೀಡಿದರು.

ಭಾನುವಾರ ಇಲ್ಲಿನ ಗೋಕಾಕ ಶಿಕ್ಷಣ ಸಂಸ್ಥೆಯ ಜೆಎಸ್ಎಸ್ ಮಹಾವಿದ್ಯಾಲಯದ ಬಿ.ಎಡ್. ಸಭಾ ಭವನದಲ್ಲಿ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಗೋಕಾಕ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ 18ನೇ ವಾರ್ಷಿಕೋತ್ಸವ ಆಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಸಮಾಜವು ಪ್ರತಿಯೊಬ್ಬ ಪ್ರತಿಭೆಯ ಬೆಂಬಲಕ್ಕೆ ನಿಂತಾಗ ಪ್ರತಿಭಾನ್ವಿತರು ಸಾಧನೆ ಈಡೇರಿಕೆಗೆ ಒತ್ತು ನೀಡುವಂತೆ ಕಿವಿಮಾತು ಹೇಳಿದರು.

ತಾಲ್ಲೂಕು ಘಟಕದಿಂದ ʼಬಣಜಿಗʼರ ಜನಗಣತಿ ಕಾರ್ಯ ನಡೆಸಬೇಕು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ʼಬಣಜಿಗʼ ಸಮಾಜದ ವಿದ್ಯಾರ್ಥಿಗಳಿಗೆ 2ಎ ಮೀಸಲಾತಿ ಸೌಲಭ್ಯ ನಿರಂತರವಾಗಿ ದೊರೆಯುತ್ತಿದೆ, ಇದುವೇ ಸರ್ಕಾರಿ ಸೇವೆಗೂ ವಿಸ್ತರಣೆ ಆಗಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ರೂಡಗಿ ಅವರು ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಸಮಾಜ ಬಾಂಧವರನ್ನು ಮೇಲೆತ್ತಿ ಮುಖ್ಯ ವಾಹಿನಿಗೆ ಕರೆ ತರುವುದೇ ಸಂಘದ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಹೇಳಿದರು.

ಸಂಘದ ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಮತ್ತು ಯುವ ಮುಖಂಡ ರಾಹುಲ ಜಾರಕಿಹೊಳಿ ಮಾತನಾಡಿ ಸಂಘದ ಚಟುವಟಿಕೆಗಳನ್ನು ಶ್ಲಾಘಿಸಿದರು.

ವರ್ತಕ ಮಹಾಂತೇಶ ತಾಂವಶಿ ಅವರು ಮಾತನಾಡಿ, ತಾಲ್ಲೂಕು ಘಟಕದಿಂದ ಬಣಜಿಗರ ಯಾದಿ ಮಾಡುವ ಕಾರ್ಯಕೈಗೊಂಡಲ್ಲಿ ಅಂಥ ಚಟುವಟಿಕೆಯ ವೆಚ್ಚವನ್ನು ಭರಿಸುವ ಘೋಷಣೆ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಪ್ರೊ. ಚನ್ನಪ್ಪ ಕೌಜಲಗಿ ಅವರು, ಸಂಘದ ಶ್ರೇಯಸ್ಸಿಗಾಗಿ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿದರು.

ವೇದಿಕೆಯಲ್ಲಿ ಸಂಘದ ರಾಜ್ಯ ವಿಶ್ವಸ್ಥ ಮಂಡಳಿ ಸದಸ್ಯ ಬಸನಗೌಡ ಪಾಟೀಲ, ಗೋ.ಶಿ. ಸಂಸ್ಥೆ ಚೇರಮನ್ ವಿಶ್ವನಾಥ ಕಡಕೋಳ, ಡಾ. ವಿ.ಬಿ.ಉಪ್ಪಿನ, ತಾಲ್ಲೂಕು ಯುವ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ (ಬಾಬು) ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಸಲಹಾ ಸಮಿತಿ ಸದಸ್ಯರಾದ ಎಂ.ಡಿ.ಚುನಮರಿ, ಸಿ.ಸಿ.ಕೊಣ್ಣೂರ, ವಿ.ಎಸ್.ಬಿದರಿ, ಜೆ.ಎಂ.ಮುನವಳ್ಳಿ, ಎ.ಬಿ.ದಯನ್ನವರ, ಆರ್. ಎಂ.ಕಲ್ಯಾಣಶೆಟ್ಟಿ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಪೂರ್ಣಿಮಾ ತಾಂವಶಿ, ಸುಹಾಸಿನಿ ನಂದಿ ಮತ್ತು ರೇಖಾ ವಾಲಿ ನಿರೂಪಿಸಿದರು. ಪ್ರಾಚಾರ್ಯ ಪ್ರಕಾಶ ಲಕ್ಷೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.