ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22 ಮಂದಿ ನೌಕರರಿಗೆ ಕೆಲಸದಿಂದ ಕೊಕ್

Last Updated 16 ಏಪ್ರಿಲ್ 2021, 15:48 IST
ಅಕ್ಷರ ಗಾತ್ರ

ಬೆಳಗಾವಿ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಎನ್‌ಡಬ್ಲ್ಯುಕೆಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 10ನೇ ದಿನವಾದ ಶುಕ್ರವಾರವೂ ಮುಂದುವರಿಯಿತು. ಬಹುತೇಕ ನೌಕರರು ಕೆಲಸದಿಂದ ದೂರ ಉಳಿದರು.

‘ಬೆಳಗಾವಿ ವಿಭಾಗದಲ್ಲಿ 182 ಮಂದಿ ನೌಕರರು ಕೆಲಸಕ್ಕೆ ಹಾಜರಾದರು. 138 ಬಸ್‌ಗಳ ಕಾರ್ಯಾರಣೆ ನಡೆದಿದೆ. ತಿಳಿವಳಿಕೆ, ಸೂಚನೆ ಹಾಗೂ ಎಚ್ಚರಿಕೆ ನೀಡಿದ ನಡುವೆಯೂ ಕೆಲಸಕ್ಕೆ ಹಾಜರಾಗದೆ ಇರುವುದರಿಂದ 22 ಮಂದಿ ತರಬೇತಿ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ. ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಂಡು ಮುಷ್ಕರ ಬಿಟ್ಟು ಬರಬೇಕು’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದರು.

‘10 ದಿನಗಳಿಂದ ವಿಭಾಗಕ್ಕೆ ₹ 5.50 ಕೋಟಿ ನಷ್ಟ ಉಂಟಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT