ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಡಿ.ಸಿ ಕಚೇರಿಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಯತ್ನ

Published 10 ಜನವರಿ 2024, 12:25 IST
Last Updated 10 ಜನವರಿ 2024, 12:25 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಯುವಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.

ಗೋಕಾಕ ತಾಲ್ಲೂಕಿನ ಲಗಮೇಶ್ವರ ಗ್ರಾಮದ ಕುಮಾರ ಕಲ್ಲಪ್ಪ ಕೊಪ್ಪದ (23) ಆತ್ಮಹತ್ಯೆಗೆ ಯತ್ನಿಸಿದವರು. ಕ್ರಿಮಿನಾಶಕ ಸೇವಿಸಿ ನೆಲಕ್ಕೆ ಬಿದ್ದ ಯುವಕನನ್ನು ಪೊಲೀಸರು ಆಂಬುಲೆನ್ಸ್‌ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಡಿಯುವ ನೀರಿನ ಬಾಟಲಿಯಲ್ಲಿ ಕ್ರಿಮಿನಾಶಕ ಹಾಕಿಕೊಂಡು ಬಂದಿದ್ದ ಯುವಕ, ಜಿಲ್ಲಾಧಿಕಾರಿಯನ್ನು ಭೇಟಿ ಆಗಬೇಕು ಎಂದು ವಿಚಾರಿಸಿದ್ದರು. ತುಸು ಹೊತ್ತು ಅತ್ತಿತ್ತ ಸುಳಿದಾಡಿ ಕ್ರಿಮಿನಾಶಕ ಕುಡಿದರು. ಘಟನೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ಯುವಕನ ಆರೋಗ್ಯ ಸುಧಾರಿಸಿದ ಮೇಲೆ ವಿಷಯ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಕೆಟ್‌ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT