ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ಮಂದಿಯಿಂದ ರಕ್ತ ದಾನ

Last Updated 14 ಜೂನ್ 2021, 17:00 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಬಿಮ್ಸ್ (ಜಿಲ್ಲಾಸ್ಪತ್ರೆ) ರಕ್ತಭಂಡಾರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸ್ವಯಂಪ್ರೇರಿತ ರಕ್ತ ದಾನ ಶಿಬಿರವನ್ನು ಸೋಮವಾರ ನಡೆಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಿಮ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ರಕ್ತ ದಾನದ ಮಹತ್ವ ತಿಳಿಸಿದರು.

25 ಮಂದಿ ರಕ್ತ ದಾನ ಮಾಡಿದರು.

ಹಲವು ಬಾರಿ ರಕ್ತ ನೀಡಿದವರನ್ನು ಸನ್ಮಾನಿಸಲಾಯಿತು.

ಬಿಮ್ಸ್ ಪ್ರಭಾರ ನಿರ್ದೇಶಕ ಡಾ.ಉಮೇಶ ಕುಲಕರ್ಣಿ, ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಗಿರೀಶ ದಂಡಿನ, ಮುಖ್ಯ ಆಡಳಿತಾಧಿಕಾರಿ ಎಸ್.ಎಸ್. ಬಳ್ಳಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುಧಾಕರ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಕೇಶವ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಅನಿಲ ಕೊರ್ಬು, ರಕ್ತಭಂಡಾರದ ವೈದ್ಯಾಧಿಕಾರಿಗಳಾದ ಡಾ.ಶ್ರೀದೇವಿ ಬೋಬಾಟಿ, ಡಾ.ಗೀತಾಮಾಲಾ, ಡಾ.ಆರ್.ಜೆ. ಪಾಟೀಲ ಇದ್ದರು.

ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೆಳಗಾವಿ ಘಟಕದ ಕಾರ್ಯದರ್ಶಿ ಡಿ.ಎನ್. ಮಿಸಾಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT