ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಲೋಳಿ ಮಹಾಲಕ್ಷ್ಮಿ ಸೊಸೈಟಿಗೆ ₹2.51 ಕೋಟಿ ಲಾಭ: ಈರಣ್ಣ ಕಡಾಡಿ

Published 7 ಏಪ್ರಿಲ್ 2024, 13:23 IST
Last Updated 7 ಏಪ್ರಿಲ್ 2024, 13:23 IST
ಅಕ್ಷರ ಗಾತ್ರ

ಮೂಡಲಗಿ: ‘ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸೊಸೈಟಿಯು 2023–24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹2.51 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು.

ಸೊಸೈಟಿಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಸೊಸೈಟಿಯಲ್ಲಿ 12,612 ಸದಸ್ಯರಿದ್ದು, ₹20.12 ಲಕ್ಷ ಶೇರು ಬಂಡವಾಳ, ₹6.96 ಕೋಟಿ ಕಾಯ್ದಿಟ್ಟ ನಿಧಿ, ₹71.10 ಕೋಟಿ ಠೇವು ಸಂಗ್ರಹ ಹಾಗೂ ₹66.71 ಕೋಟಿ ಸಾಲವನ್ನು ವಿತರಿಸಲಾಗಿದೆ’ ಎಂದು ತಿಳಿಸಿದರು.

‘ಸೊಸೈಟಿಯು ₹8.89 ಕೋಟಿ ಗುಂತಾವಣಿಗಳನ್ನು ಹೊಂದಿದ್ದು, ₹78.10 ಕೊಟಿ ದುಡಿಯುವ ಬಂಡವಾಳ, ₹318 ಕೋಟಿ ವಹಿವಾಟು ಮಾಡಿದೆ. ಕಲ್ಲೋಳಿಯಲ್ಲಿ ನಿರ್ಮಿಸುತ್ತಿರುವ ಸೊಸೈಟಿಯ ಪ್ರಧಾನ ಕಚೇರಿಯ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಗ್ರಾಹಕರಿಗೆ ಹೊಸ ಕಟ್ಟಡದಲ್ಲಿ ಇನ್ನು ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು’ ಎಂದರು.

ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸತೀಶ ಕಡಾಡಿ, ಸೊಸೈಟಿ ಉಪಾಧ್ಯಕ್ಷ ಶ್ರೀಶೈಲ್‌ ತುಪ್ಪದ, ನಿರ್ದೇಶಕರಾದ ಬಾಳಪ್ಪ ಸಂಗಟಿ, ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಶಿವಗೊಂಡ ವ್ಯಾಪಾರಿ, ಶಿವಪ್ಪ ಗೋಸಬಾಳ, ಸಿದ್ದಪ್ಪ ಹೆಬ್ಬಾಳ, ಮಲ್ಲಿಕಾರ್ಜುನ ಹುಲೆನ್ನವರ, ಸೋಮಲಿಂಗ ಹಡಗಿನಾಳ, ಮಾರುತಿ ಮಕ್ಕಳಗೇರಿ, ಬೆಟಗೇರಿ ಶಾಖೆಯ ಈರಪ್ಪ ದೇಯನ್ನವರ, ಘಟಪ್ರಭಾ ಶಾಖೆಯ ರಾಜು ಕತ್ತಿ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ಶಾಖಾ ವ್ಯವಸ್ಥಾಪಕರಾದ ಪರಪ್ಪ ಗಿರೆಣ್ಣವರ, ಶಂಕರ ಕೌಜಲಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT