ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ

Last Updated 13 ಆಗಸ್ಟ್ 2020, 16:21 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಬಿಮ್ಸ್‌ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ.

140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಗುರುವಾರದವರೆಗೆ ಜಿಲ್ಲೆಯಲ್ಲಿ 59,188 ಮಂದಿಯಿಂದ ಗಂಟಲು ಅಥವಾ ಮೂಗಿನ ದ್ರವದ ಮಾದರಿ ಪರೀಕ್ಷಿಸಲಾಗಿದೆ. 51,470 ಮಂದಿಯ ವರದಿ ನೆಗೆಟಿವ್ ಬಂದಿದೆ.

ನಿಪ್ಪಾಣಿ ವರದಿ:ನಗರದ 28 ಸೇರಿ ತಾಲ್ಲೂಕಿನಲ್ಲಿ ಐವರಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ 212ಕ್ಕೆ ಏರಿದೆ. ಕೊಗನೋಳಿ, ಡೋಣೆವಾಡಿ, ಕಾರದಗಾ, ಬಾರವಾಡ ಹಾಗೂ ಬೆನಾಡಿ ಗ್ರಾಮದ ತಲಾ ಒಬ್ಬರಿಗೆ ಸೋಂಕು ತಗುಲಿದೆ.

ಖಾನಾಪುರ ವರದಿ:ಪಟ್ಟಣದ 2 ವರ್ಷದ ಬಾಲಕ ಸೇರಿದಂತೆ ತಾಲ್ಲೂಕಿನಲ್ಲಿ ಗುರುವಾರ 6 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಇಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 150ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT