ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಎ ಮೀಸಲಾತಿ: 7ರಂದು ಕಲ್ಲೋಳಿಯಲ್ಲಿ ಸಮಾವೇಶ

Last Updated 7 ಅಕ್ಟೋಬರ್ 2022, 5:02 IST
ಅಕ್ಷರ ಗಾತ್ರ

ಬೆಳಗಾವಿ: 'ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ, ಉಗ್ರ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ಅ.7ರಂದು ಸಭೆ ಕರೆಯಲಾಗಿದೆ' ಎಂದು ಕೂಡಲಸಂಗಮದ ಪಂಚಮಸಾಲಿ ಪಿಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

'ಈಗಾಗಲೇ ನಡೆಸಿದ ಹೋರಾಟಗಳಿಗೆ ಸರ್ಕಾರ ಬೆಲೆ ಕೊಟ್ಟಿಲ್ಲ. ಈಗ ಬಿಸಿ ಮುಟ್ಟಿಸುವ ಸಲುವಾಗಿ ಹೋರಾಟ ತೀವ್ರಗೊಳಿಸಬೇಕಿದೆ. ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಭೆಯ ನೇತೃತ್ವ ವಹಿಸುವರು' ಎಂದು ಅವರು ನಗರದಲ್ಲಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಶುಕ್ರವಾರ (ಅ.7) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಆ ಸಂದರ್ಭದಲ್ಲಿ ಪಂಚಮಸಾಲಿ 2ಎ‌ ಮೀಸಲಾತಿ ವಿಚಾರವಾಗಿ ಚರ್ಚಿಸಿ, ಸಿಹಿ ಸುದ್ದಿ ನೀಡಲಿದ್ದಾರೆ ಎನ್ನುವ ಭರವಸೆ ಇದೆ. ಅದಾಗಿಯೂ ನಮ್ಮ ಸಿದ್ಧತೆಯಲ್ಲಿ ನಾವಿದ್ದೇವೆ' ಎಂದರು.

'ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ವಿಚಾರವಾಗಿ ಮಾತು ನೀಡಿ ತಪ್ಪಿದ್ದಾರೆ. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ‌ಅವರೂ ಮಾತು ತಪ್ಪಿದ ಹಿನ್ನೆಲೆಯಲ್ಲಿ ಶಿಗ್ಗಾವಿಯ ಅವರ ನಿವಾಸದ ಎದುರು ಧರಣಿ ನಡೆಸಬೇಕಾಯಿತು. ಈಗಾಗಲೇ ಸಾಕಷ್ಟು ಉಪವಾಸ ಸತ್ಯಾಗ್ರಹ, ಪಾದಯಾತ್ರೆ, ಧರಣಿಗಳನ್ನೂ ಮಾಡಿದ್ದೇವೆ. ಅಲ್ಲದೇ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸದನದಲ್ಲಿಯೂ ಧ್ವನಿ ಎತ್ತಿದ್ದಾರೆ. ಆದರೂ ಸರ್ಕಾರ ನಮ್ಮ ಸಮಾಜದ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ದೃಢ ನಿರ್ಧಾರ ಕೈಗೊಳ್ಳುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಮುಖಂಡರಾದ ರುದ್ರಣ್ಣ ಚಂದರಗಿ, ಆರ್.ಕೆ.ಪಾಟೀಲ, ಹಣಮಂತ ಕೊಂಗಾಲಿ, ರಾಜೇಂದ್ರ ಹರಕುಣಿ, ಬಿ.ಐ.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT