ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು 2ನೇ ಬಲಿ ಪಡೆದಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ನೀಡಿರುವ ಮಾಹಿತಿ ಪ್ರಕಾರ, 32 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ 14579) ಮೃತರು. ‘ಅವರಿಗೆ ಎಸ್‌ಎಆರ್‌ಐ (ತೀವ್ರ ಉಸಿರಾಟದ ಸಮಸ್ಯೆ) ಇತ್ತು. ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನು ಸೋಮವಾರ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮಾರ್ಗ ಮಧ್ಯದಲ್ಲೇ ಸಾವಿಗೀಡಾಗಿದ್ದಾರೆ. ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ಪಾಸಿಟಿವ್ ವರದಿ ಬಂದಿದೆ’ ಎದು ಅಧಿಕಾರಿಗಳು ಮಾಹಿತಿ ನೀಡಿದರು.

ಮೃತರು ಅಥಣಿ ತಾಲ್ಲೂಕಿನವರಾಗಿದ್ದಾರೆ. ವಿದೇಶದಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಅವರು ಜನವರಿಯಲ್ಲಿ ಊರಿಗೆ ವಾಪಸಾಗಿದ್ದರು. ಮನೆಯಿಂದಲೇ ತಮ್ಮ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಥಣಿ ತಾಲ್ಲೂಕು ಆಡಳಿತದಿಂದ ಸೋಮವಾರ ತಡರಾತ್ರಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಕುಟುಂಬದವರು ಸೇರಿ 8 ಮಂದಿ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ 12 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರದಿಂದ ವಾಪಸಾದ 25 ವರ್ಷದ ಮಹಿಳೆಗೆ (ರೋಗಿ ಸಂಖ್ಯೆ 14580) ಮಂಗಳವಾರ ಕೋವಿಡ್–19 ದೃಢಪಟ್ಟಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು (ರೋಗಿ ಸಂಖ್ಯೆ 4564, 9401 ಹಾಗೂ 10323) ಗುಣಮುಖರಾಗಿದ್ದು ಅವರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.