ಮಂಗಳವಾರ, ಆಗಸ್ಟ್ 3, 2021
24 °C

ಬೆಳಗಾವಿ: ಮೂವರು ಆರೋಪಿಗಳ ಬಂಧನ, 18 ದ್ವಿಚಕ್ರವಾಹನ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ವಾಹನ ಕಳವು ಆರೋಪದ ಮೇಲೆ ಮೂವರನ್ನು ಬುಧವಾರ ಬಂಧಿಸಿ ಅವರಿಂದ ₹ 6.50 ಲಕ್ಷ ಮೌಲ್ಯದ 18 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಮಚ್ಚೆಯ ಮಾರುತಿ ಗಲ್ಲಿಯ ಅಕ್ಷಯ ಚೌಗುಲೆ, ಬಸವನಕುಡಚಿಯ ಮಹೇಶ ಅನಗೋಳಕರ ಹಾಗೂ ಆಕಾಶ ಅನಗೋಳಕರ ಬಂಧಿತರು.

ರಾಜಹಂಸಗಡ ಕೋಟೆ ಬಳಿ ದ್ವಿಚಕ್ರವಾಹನ ಕಳವಾದ ಬಗ್ಗೆ ಜುಲೈ 9ರಂದು ಪ್ರಕರಣ ದಾಖಲಾಗಿತ್ತು. ಇದರ ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ‘ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರು ನೀಡಿದ ಮಾಹಿತಿ ಮೇರೆಗೆ ನಗರದ ವಿವಿಧ ಭಾಗಗಳಿಂದ ಕಳವು ಮಾಡಿದ್ದ 17 ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು