ಶುಕ್ರವಾರ, ಅಕ್ಟೋಬರ್ 30, 2020
28 °C

27 ಕೆ.ಜಿ. ಗಾಂಜಾ ವಶ, 13 ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರ ಪೊಲೀಸರು ಇಲ್ಲಿ ಪ್ರತ್ಯೇಕವಾಗಿ ಮೂರು ದಾಳಿ ನಡೆಸಿ ಒಟ್ಟು 27 ಕೆ.ಜಿ. ಗಾಂಜಾ ವಶಪಡಿಸಿಕೊಂಡು, 13 ಮಂದಿ ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.

ಸಿಸಿಐಬಿ, ಮಾಳಮಾರುತಿ ಹಾಗೂ ಎಪಿಎಂಸಿ ಠಾಣೆ ಪೊಲೀಸರು ಗಾಂಜಾ ಮಾರಾಟಗಾರರ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. 11 ಮೊಬೈಲ್‌ ಫೋನ್‌ಗಳು, 1 ಕಾರ್, 3 ದ್ವಿಚಕ್ರವಾಹನ ಹಾಗೂ  ₹ 15ಸಾವಿರ ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

‘ಕಾರ್ಯಾಚರಣೆ ಮುಂದುವರಿಯಲಿದೆ. ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.