ಮಂಗಳವಾರ, ಡಿಸೆಂಬರ್ 1, 2020
21 °C

ಬೆಳಗಾವಿ: 30 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆ ನಾಳೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿರುವ 30 ಹಾಸಿಗೆಗಳ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಂಗಳವಾರ (ನ.17) ಬೆಳಿಗ್ಗೆ 11ಕ್ಕೆ ಉದ್ಘಾಟಿಸಲಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶಾಸಕ ಅನಿಲ ಬೆನಕೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರು ಭಾಗವಹಿಸಲಿದ್ದಾರೆ ಎಂದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಅಮೃತ ಯೋಜನೆ-ಉದ್ಯಾನ ಉದ್ಘಾಟನೆ
ಮಹಾನಗರ ಪಾಲಿಕೆಯ ವತಿಯಿಂದ, ಕೇಂದ್ರ ಸರ್ಕಾರದ ಅಮೃತ್ ಯೋಜನೆಯಲ್ಲಿ ಬಾಕ್ಸೈಟ್ ರಸ್ತೆಯ ಹನುಮಾನ ನಗರ(ಕುಮಾರ ಸ್ವಾಮಿ ಲೇಔಟ್ ಎದುರಿಗೆ)ದಲ್ಲಿ ಅಭಿವೃದ್ಧಿಪಡಿಸಿರುವ ಉದ್ಯಾನವನ್ನು ಮಂಗಳವಾರ(ನ‌.17) ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು