ಮಂಗಳವಾರ, ಅಕ್ಟೋಬರ್ 27, 2020
22 °C

ಬೆಳಗಾವಿ: ಬೆಳೆ ಹಾನಿ, ₹ 319 ಕೋಟಿ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ವ್ಯಕ್ತಿ ಮೃತರಾಗಿದ್ದಾರೆ. ಆರು ಜಾನುವಾರು ಸಾವಿಗೀಡಾಗಿವೆ. 270 ಮನೆಗಳು ಕುಸಿದಿವೆ. 62ಕ್ಕೆ ಭಾಗಶಃ ಹಾನಿಯಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷಿ ಇಲಾಖೆ ವ್ಯಾಪ್ತಿಯಲ್ಲಿ 35,238 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಅಂದಾಜು ₹ 315  ಕೋಟಿ ನಷ್ಟ ಸಂಭವಿಸಿದೆ. 35.55 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಅಂದಾಜು ₹ 4 ಕೋಟಿ ನಷ್ಟವಾಗಿದೆ. ಸಮೀಕ್ಷೆಗೆ ಸೂಚಿಸಲಾಗಿದ್ದು, ಶೀಘ್ರವೇ ಸರ್ಕಾರಕ್ಕೆ ಬೆಳೆ ಹಾನಿ ವರದಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.