ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ₹ 3.25 ಕೋಟಿ

ಜಿಲ್ಲಾ ಪಂಚಾಯಿತಿ ಸಿಇಒ ಮಾಹಿತಿ
Last Updated 7 ಮೇ 2020, 5:19 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ₹ 3.25 ಕೋಟಿ ವೆಚ್ಚದಲ್ಲಿ 177 ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ದೊರೆತಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

‘ಶಾಸಕರ ನೇತೃತ್ವದ ಕಾರ್ಯಪಡೆ ಸಮಿತಿಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ಪಡೆದು ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರು ತಿಳಿಸಿದ್ದರು. ಅದರಂತೆ, 10 ತಾಲ್ಲೂಕುಗಳಿಂದ ಶಾಸಕರ ನೇತೃತ್ವದಲ್ಲಿ ಕ್ರಿಯಾಯೋಜನೆ ತಯಾರಿಸಿ ಜಿಲ್ಲಾ ಪಂಚಾಯಿತಿಗೆ ಆಯಾ ವಿಭಾಗದವರು ಸಲ್ಲಿಸಿದ್ದರು. ಕ್ರಿಯಾ ಯೋಜನೆಗೆ ಆಯುಕ್ತರು ಅನುಮೋದನೆ ಕೊಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾದಲ್ಲಿ ಉಪವಿಭಾಗ ಕೇಂದ್ರಗಳಲ್ಲಿ ಚಾಲ್ತಿಯಲ್ಲಿರುವ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಿ ದೂರು ದಾಖಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸಹಾಯವಾಣಿ

ಉಪವಿಭಾಗ– ಸಂಪರ್ಕಸಂಖ್ಯೆ

ಬೆಳಗಾವಿ– 0831 2447322

ಖಾನಾಪುರ– 08336 223708

ಬೈಲಹೊಂಗಲ– 08288 233341

ಸವದತ್ತಿ– 08330 222066

ರಾಮದುರ್ಗ– 08335 242633

ಅಥಣಿ– 9741266377

ಚಿಕ್ಕೋಡಿ– 9480634211

ಗೋಕಾಕ– 08332-225132/6360747464

ಹುಕ್ಕೇರಿ– 94488 45039

ರಾಯಬಾಗ– 9741280225

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT