ಬುಧವಾರ, ಜನವರಿ 26, 2022
25 °C

ಬೆಳಗಾವಿ: 335 ಕೆ.ಜಿ. ಮಾದಕ ವಸ್ತು ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 28 ಪ್ರಕರಣಗಳಲ್ಲಿ ಅಂದಾಜು ₹ 8.48 ಲಕ್ಷ ಮೌಲ್ಯದ 335 ಕೆ.ಜಿ. 516 ಗ್ರಾಂ. ಮಾದಕ ವಸ್ತುಗಳನ್ನು ಬುಧವಾರ ನಾಶಪಡಿಸಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದವರು ಹಾಗೂ ಗಾಂಜಾ ಮೊದಲಾದ ಬೆಳೆಯುತ್ತಿದ್ದವರ ಮೇಲೆ ದಾಳಿ ನಡೆಸಿ ಎನ್‌ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನ್ಯಾಯಾಲಯ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಅನುಮತಿಯೊಂದಿಗೆ ಹಾರೂಗೊಪ್ಪದ ಬೆಳಗಾವಿ ಗ್ರೀನ್ ಎನ್ವಿರಾನ್‌ಮೆಂಟಲ್ ಮ್ಯಾನೇಜ್‌ಮೆಂಟ್ ಕಂಪನಿಯಲ್ಲಿ ನಿಯಮಾನುಸಾರ ನಾಶಪಡಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು