ಬೆಳಗಾವಿ: ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಎನ್ಡಬ್ಲ್ಯುಕೆಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 5ನೇ ದಿನವಾದ ಭಾನುವಾರವೂ ಮುಂದುವರಿಯಿತು.

ಕ್ರಮೇಣ ನೌಕರರು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. 39 ಮಂದಿ ಚಾಲಕರು ಹಾಗೂ ನಿರ್ವಾಹಕರು ಬಂದು ಕಾರ್ಯನಿರ್ವಹಿಸಿದರು. ಇದರಿಂದ ಕೆಲವು ಮಾರ್ಗಗಳಲ್ಲಿ ಬಸ್ಗಳು ಕಾರ್ಯಾಚರಣೆ ನಡೆಸಿವೆ.

ಈ ನಡುವೆ, ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ಸಂಸ್ಥೆಯು ಶಿಸ್ತುಕ್ರಮಕ್ಕೆ ಮುಂದಾಗಿದೆ. ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ. ‘23 ಮಂದಿಯನ್ನು ವರ್ಗಾಯಿಸಲಾಗಿದೆ. ಒಬ್ಬ ತರಬೇತಿ ಚಾಲಕನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ’ ಎಂದು ಎನ್ಡಬ್ಲ್ಯುಕೆಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದರು.

‘ಯುಗಾದಿ ಹಬ್ಬ ಬರುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯೂ ಇದೆ. ಹೀಗಾಗಿ, ನೌಕರರು ಕೆಲಸಕ್ಕೆ ಹಾಜರಾಗಬೇಕು’ ಎಂದು ಕೋರಿದರು.

ಕೆಲವು ಖಾಸಗಿ ವಾಹನಗಳು ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಾಚರಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.