ಸೋಮವಾರ, ಆಗಸ್ಟ್ 8, 2022
21 °C

‘455 ಬಸ್‌ಗಳ ಕಾರ್ಯಾಚರಣೆ ಸ್ಥಗಿತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸಾರಿಗೆ ನೌಕರರ ಮುಷ್ಕರದಿಂದಾಗಿ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಶುಕ್ರವಾರ 455 ಬಸ್‌ಗಳ ಕಾರ್ಯಾಚರಣೆ ನಡೆಯಲಿಲ್ಲ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬೆಳಿಗ್ಗೆ 8ರವರೆಗೆ ಕೇವಲ 21 ಬಸ್‌ಗಳ ಕಾರ್ಯಾಚರಣೆಯಷ್ಟೆ ಆಗಿದೆ. ನೌಕರರು ಮುಷ್ಕರ ನಡೆಸುವುದಾಗಿ ನಮಗೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ. ಕೇಂದ್ರ ಸಂಘಟನೆಯವರಿಂದ ಸೂಚನೆ ಬಂತು ಎಂದು ಹೇಳುತ್ತಿದ್ದಾರೆ. ಬೆಳಿಗ್ಗೆ 8ರ ನಂತರ ಇಲ್ಲಿಂದ ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಬೇರೆ ಕಡೆಗಳಿಗೆ ಹಾಗೂ ಇತರ ಕಡೆಗಳಿಂದ ಇಲ್ಲಿಗೆ ಬಸ್‌ಗಳು ಬಂದಿಲ್ಲ. ಇದರಿಂದ ಎಷ್ಟು ನಷ್ಟ ಉಂಟಾಗಿದೆ ಎನ್ನುವ ಅಂದಾಜು ಶನಿವಾರ ಗೊತ್ತಾಗಲಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.