ಮಂಗಳವಾರ, ಸೆಪ್ಟೆಂಬರ್ 29, 2020
22 °C
ಮತ್ತೆ

ಬೆಳಗಾವಿ: 235 ಮಂದಿಗೆ ಕೋವಿಡ್ ದೃಢ, 455 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 235 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5,409ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 3,211 ಆಗಿವೆ.

455 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ನಗರದ ವಿವಿಧ ಬಡಾವಣೆಗಳು ಹಾಗೂ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕೆಲವು ಆಸ್ಪತ್ರೆಗಳು ಹಾಗೂ ಬ್ಯಾಂಕ್‌ ಶಾಖೆಯ ಸಿಬ್ಬಂದಿಗೂ ಕೋವಿಡ್ ದೃಢಪಟ್ಟಿದೆ. ಉಳಿದಂತೆ ಗೋಕಾಕ, ಖಾನಾಪುರ, ಸವದತ್ತಿ, ಹುಕ್ಕೇರಿ, ರಾಯಬಾಗ, ಅಥಣಿ, ಬೈಲಹೊಂಗಲ, ರಾಮದುರ್ಗ ತಾಲ್ಲೂಕುಗಳಲ್ಲಿ ಸೋಂಕು ಹರಡಿದೆ. ಅವರೆಲ್ಲರನ್ನೂ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿದ್ದ ಮನೆ ಹಾಗೂ ಕಾರ್ಯನಿರ್ವಹಿಸುತ್ತಿದ್ದ ಕಚೇರಿಗಳ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಭಾನುವಾರದವರೆಗೆ 45,755 ಮಂದಿಯ ಗಂಟಲು ಅಥವಾ ಮೂಗಿನ ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 39,175 ಮಂದಿಯ ವರದಿ ನೆಗೆಟಿವ್ ಬಂದಿದೆ. ಈ ಸೋಂಕಿನ ಕಾರಣದಿಂದ ಒಟ್ಟು 94 ಮಂದಿ ಸಾವಿಗೀಡಾಗಿದ್ದಾರೆ. 371 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ ಇದೆ.

ಗೋಕಾಕ ವರದಿ: ‘ಕೊರೊನಾ ಸೋಂಕು ಹರಡುತ್ತಿರುವುದರಿಂದಾಗಿ ತಾಲ್ಲೂಕಿನಾದ್ಯಂತ ಕನಿಷ್ಠ 15 ದಿನಗಳವರೆಗೆ ಲಾಕ್‌ಡೌನ್‌ ಮಾಡಬೇಕು’ ಎಂದು ಆಗ್ರಹಿಸಿ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶಗಳು ಹರಿದಾಡುತ್ತಿವೆ.

ಅಂಗಡಿಗಳನ್ನು ತೆರೆಯದಿರಲು ಕೆಲವು ವರ್ತಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು