ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಡೆ ಕುಸಿದು ಬಿದ್ದು ಮೃತಪಟ್ಟ ವೃದ್ಧೆ: ಸಂತ್ರಸ್ತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Published 26 ಜುಲೈ 2023, 13:26 IST
Last Updated 26 ಜುಲೈ 2023, 13:26 IST
ಅಕ್ಷರ ಗಾತ್ರ

ಬೈಲಹೊಂಗಲ: ‘ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಮೃತಪಟ್ಟ ವೃದ್ಧೆ ಈರವ್ವ ಶಿವಪ್ಪ ಪತ್ರೆಪ್ಪನವರ ಅವರ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರಧನ ವಿತರಿಸಲಾಗುವುದು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸರ್ಕಾರದ ಆದೇಶ ಪ್ರತಿ ನೀಡಿ ಅವರು ಮಾತನಾಡಿದರು.

‘ಸತತ ಮಳೆಯಿಂದ ಜನ, ಜಾನುವಾರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರ, ಜಾನುವಾರುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮ ಕೈಕೊಳ್ಳಲಾಗುತ್ತಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಸಹಾಯಧನ ಒದಗಿಸಲಾಗುತ್ತಿದೆ. ಅದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಗ್ರೇಟ್ 2 ತಹಶೀಲ್ದಾರ್ ಜೆ.ಸಿ.ಅಷ್ಟಗಿಮಠ, ಗ್ರಾಮಲೆಕ್ಕಾಧಿಕಾರಿ, ಪಿಡಿಒ, ಕುಟುಂಬ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT