ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನು ಮಾರುಕಟ್ಟೆ ಅಭಿವೃದ್ಧಿಗೆ ₹ 50 ಲಕ್ಷ: ಬೆನಕೆ

Last Updated 6 ಜನವರಿ 2021, 13:14 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮೀನು ಮಾರುಕಟ್ಟೆ ಅಭಿವೃದ್ಧಿಗೆ ಮೊದಲ ಹಂತದಲ್ಲಿ ₹ 50 ಲಕ್ಷ ಅನುದಾನ ಬಿಡುಗಡೆಯಾಗಿದೆ’ ಎಂದು ಉತ್ತರ ವಲಯ ಶಾಸಕ ಅನಿಲ ಬೆನಕೆ ತಿಳಿಸಿದರು.

‘ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಅದರಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಕ್ಷೇತ್ರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ, ನಗರಾಭಿವೃದ್ಧಿ ಯೋಜನೆಯಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದಷ್ಟು ಬೇಗನೆ ಮೀನು ಮಾರುಕಟ್ಟೆ ಕಾಮಗಾರಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. 2ನೇ ಹಂತದಲ್ಲಿ ₹ 50 ಲಕ್ಷ ಅನುದಾನಕ್ಕಾಗಿ ಸಚಿವರನ್ನು ಕೋರಲಾಗಿದೆ’ ಎಂದು ಹೇಳಿದರು.

ಮೀನುಗಾರಿಕೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ, ಎಂಜಿನಿಯರ್‌ ಅಮರನಾಥ, ಉಪ ನಿರ್ದೇಶಕ ಶ್ರೀಪಾದ ಕುಲಕರ್ಣಿ ಇದ್ದರು.

ಇದಕ್ಕೂ ಮುನ್ನ ಶಾಸಕರು, ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಆಂಜನೇಯ ನಗರ, ಕಣಬರ್ಗಿ ಹಾಗೂ ರಾಮತೀರ್ಥ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ನಿಗದಿತ ಅವಧಿ ಮುಗಿದರೂ ಕೆಲವು ಕಾಮಗಾರಿಗಳು ಪೂರ್ಣಗೊಂಡಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಸ್ಮಾರ್ಟ್‌ ಸಿಟಿ ನಿರ್ದೇಶಕ ಶಶಿಧರ ಕುರೇರ ಇದ್ದರು.

ರುಕ್ಮಿಣಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ಅನುದಾನದಲ್ಲಿ ಕೈಗೊಂಡಿರುವ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT