ಬೆಳಗಾವಿ| ಹೊಸವಂಟಮುರಿ ಘಾಟ್ ಬಳಿ ಸರಣಿ ಅಪಘಾತ: 6 ಮಂದಿಗೆ ಗಾಯ

ಬೆಳಗಾವಿ: ತಾಲ್ಲೂಕಿನ ಹೊಸವಂಟಮುರಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ.
‘ಬೆಳಗಾವಿಯಿಂದ ಸಂಕೇಶ್ವರ ಕಡೆ ಹೋಗುತ್ತಿದ್ದ ಎರಡು ಲಾರಿ, ಎರಡು ಕಾರು ಮತ್ತು ಒಂದು ಟಂಟಂ ವಾಹನದ ಮಧ್ಯೆ ಅಪಘಾತವಾಗಿದೆ. ಗಾಯಗೊಂಡ 6 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಕಾಕತಿ ಠಾಣೆ ಪಿಎಸ್‌ಐ ಮಂಜುನಾಥ ಹುಲಕುಂದ ‘ಪ್ರಜಾವಾಣಿ’ಗೆ ತಿಳಿಸಿದರು.
ಈ ಅಪಘಾತದಿಂದಾಗಿ ಹೆದ್ದಾರಿ ಮೇಲೆ 2 ಕಿ.ಮೀ.ವರೆಗೆ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ವಾಹನಗಳ ಚಾಲಕರು ಹೈರಾಣಾದರು.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.