ಭಾನುವಾರ, ಆಗಸ್ಟ್ 1, 2021
27 °C

ಎಸ್ಸೆಸ್ಸೆಲ್ಸಿ; 69,641 ವಿದ್ಯಾರ್ಥಿಗಳು ಹಾಜರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆ ಸುಗಮವಾಗಿ ನಡೆಯಿತು. 69,641 ವಿದ್ಯಾರ್ಥಿಗಳು ಹಾಜರಾಗಿದ್ದು, 2,555 ಗೈರಾಗಿದ್ದಾರೆ.

ಕಂಟೈನ್ಮೆಂಟ್‌ ವಲಯದಿಂದ 88 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇತರ ಕಾಯಿಲೆಯಿಂದ ಬಳಲುತ್ತಿದ್ದ ಒಬ್ಬ ವಿದ್ಯಾರ್ಥಿ ಹಾಜರಾಗಿದ್ದರು. ನೆರೆ ಜಿಲ್ಲೆಯ 414 ವಿದ್ಯಾರ್ಥಿಗಳು ಹಾಗೂ ನೆರೆ ರಾಜ್ಯದ 51 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

‘ಪರೀಕ್ಷೆ ಆರಂಭವಾಗುವುದಕ್ಕೆ ಮುಂಚೆ ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕೈಗೊಳ್ಳಲಾಗಿತ್ತು. ಮಾಸ್ಕ್‌, ಸ್ಯಾನಿಟೈಸರ್‌ ಬಳಸಲಾಗಿತ್ತು. ಯಾವುದೇ ಪರೀಕ್ಷಾ ಅಕ್ರಮ ಚಟುವಟಿಕೆಗಳು ನಡೆದಿಲ್ಲ’ ಎಂದು ಡಿಡಿಪಿಐ ಎ.ಬಿ. ಪುಂಡಲೀಕ ತಿಳಿಸಿದ್ದಾರೆ.

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು